ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾಗಿ ಸಂಗಮೇಶ ಅಧಿಕಾರ ಸ್ವೀಕಾರ

15 Dwd 1
Published on

ಧಾರವಾಡ: ಕರ್ನಾಟಕ ಬಾಲವಿಕಾಸ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಸಂಗಮೇಶ ಬಬಲೇಶ್ವರ ಶನಿವಾರ ಅಧಿಕಾರ ವಹಿಸಿಕೊಂಡರು. ನಗರದ ಯಾಲಕ್ಕಿ ಶೆಟ್ಟರ್ ಕಾಲನಿಯಲ್ಲಿರುವ ಅಕಾಡೆಮಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಸಮಾರಂಭ ನಡೆಯಿತು.
ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಮಮದಾಪೂರ ಗ್ರಾಮದ ಸಂಗಮೇಶ ಅವರು, ಉನ್ನತ ಶಿಕ್ಷಣವನ್ನು ಧಾರವಾಡದಲ್ಲಿ ಪೂರಸಿದ್ದಾರೆ. ವೀರಶೈವ ಯುವ ವೇದಿಕೆಯ ರಾಜ್ಯ ಅಧ್ಯಕ್ಷರಾಗಿದ್ದ ಅವರು ಸಚಿವ ಎಂ.ಬಿ. ಪಾಟೀಲರ ಅಪ್ತವಲಯದಲ್ಲಿ ಗುರುತಿಸಿಕೊಂಡಿದ್ದಾರೆ.
ಈ ವೇಳೆ ಮಾತನಾಡಿದ ಸಂಗಮೇಶ, ಸರ್ಕಾರ ನನ್ನ ಮೇಲೆ ಭರವಸೆ ಇಟ್ಟು ಜವಾಬ್ದಾರಿ ವಹಿಸಿದೆ. ಅಕಾಡೆಮಿಯ ಸಿಬ್ಬಂದಿಗೆ ವೇತನ ಮತ್ತು ನಿರಂತರ ಕಾರ್ಯಚಟುವಟಿಕೆಗಳನ್ನು ನಡೆಸಲು ಅಗತ್ಯ ಅನುದಾನ ಪಡೆಯಲಾಗುವುದು. ಕೈಗಾರಿಕೆಗಳಿಂದ ಸಿಎಸ್‌ಆರ್ ಅನುದಾನ ಪಡೆದು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಉದ್ದೇಶವಿದೆ ಎಂದರು.
ಅಕಾಡೆಮಿ ರಿಜಿಸ್ಟ್ರಾರ್ ಭಾರತಿ ಶೆಟ್ಟರ್ ಹಾಗೂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net