

ಅಮೀನಗಡ: ಪಟ್ಟಣದ ಸಂಗಮೇಶ್ವರ ದೇವಸ್ಥಾನದ ರಥೋತ್ಸವ ಭಾನುವಾರ ಸಂಜೆ ಅದ್ದೂರಿಯಾಗಿ ನಡೆಯಿತು.
ಬೆಳಗ್ಗೆ 8.30 ಗಂಟೆಗೆ ಹುಚ್ಚಯ್ಯ ರಥೋತ್ಸವ, ಪಲ್ಲಕ್ಕಿ ಮೆರವಣಿಗೆ ಪಟ್ಟಣದ ಸಂಗಮೇಶ್ವರ ದೇವಸ್ಥಾನದಿಂದ ಹೊರಟು ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ನಂತರ ಸಂಗಮೇಶ್ವರ ಮೂರ್ತಿಗೆ ವಿಶೇಷ ಪೂಜೆ, ರುದ್ರಾಭಿಷೇಕ ನೆರವೇರಿಸಲಾಯಿತು. ಬಳಿಕ ವಿವಿಧ ವಾದ್ಯಮೇಳಗಳೊಂದಿಗೆ ಪಲ್ಲಕ್ಕಿ ಹಾಗೂ ತೇರಿನ ಕಲಶ ಮೆರವಣಿಗೆ ನಡೆಯಿತು.
ಸ್ಥಳೀಯ ಗಚ್ಚಿನಮಠದ ಪ್ರಭು ರಾಜೇಂದ್ರ ಮಹಾಸ್ವಾಮಿಗಳು ಭಕ್ತರಿಗೆ ಆಶೀರ್ವಾದ ನೀಡಿದರು. ಸ್ಥಳೀಯ ಹಾಗೂ ವಿವಿಧ ಪ್ರದೇಶದಿಂದ ಆಗಮಿಸಿದ ಭಕ್ತರು ಸಂಗಮೇಶ್ವರ ಪಲ್ಲಕ್ಕಿ ಮೂರ್ತಿಗೆ, ರಥಕ್ಕೆ ಪೂಜೆ ಸಲ್ಲಿಸಿದರು.