

ಮಂಗಳೂರು :ಪರಂಪರೆಯೊಂದಿಗೆ ಬೆಳೆದು ಬಂದಿರುವ ಸಂಗೀತ ಮನಸ್ಸಿಗೆ ಮುದ ನೀಡುವ ಅದ್ಭುತ ಕಲೆಯಾಗಿದೆ ಎಂದು ಮಾಜಿ ಎಂಎಲ್‌ಸಿ ಕ್ಯಾ.ಗಣೇಶ್ ಕಾರ್ಣಿಕ್ ಹೇಳಿದರು.
ಕಲಾ ಸಾಧನ ಮ್ಯೂಸಿಕ್ ಸ್ಕೂಲ್ ವತಿಯಿಂದ ನಗರದ ಚಿಲಿಂಬಿ ಶಾರದಾ ಮಹೋತ್ಸವ ಸಮಿತಿಯ ಸಭಾಂಗಣದಲ್ಲಿ ನಡೆದ ಸಂಗೀತ
ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಹಾರ್ಮೋನಿಯಂನಲ್ಲಿ ಕಲಾವಿದ ತೇಜಸ್ ಕಟೋಟಿ ಹಾಗೂ ತಬಲಾದಲ್ಲಿ ಸುಮಿತ್.ಎಸ್.ನಾಯಕ್ ಸಂಗೀತ ಕಾರ್ಯಕ್ರಮ ನೀಡಿದರು.
ಚಿಲಿಂಬಿ ಬಾಲಕರ ಶಾರದೋತ್ಸವ ಸಮಿತಿಯ ಅಧ್ಯಕ್ಷ ಸುಬ್ರಾಯ ನಾಯಕ್,ಶಾರದಾ ಮಹಿಳಾ ಮಂಡಲದ ಅಧ್ಯಕ್ಷೆ ಅಡಿಗೆ ಪದ್ಮಾಶೆಣೈ ,ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮುಖ್ಯ ಅತಿಥಿಗಳಾಗಿ
ಭಾಗವಹಿಸಿದ್ದರು. ಕಲಾ ಸಾಧನ ಮ್ಯೂಸಿಕ್ ಸ್ಕೂಲ್ನ ನಿರ್ದೇಶಕಿ ವಿಭಾ ಶ್ರೀನಿವಾಸ ನಾಯಕ್ ಸ್ವಾಗತಿಸಿದರು.