ಪೀರನವಾಡಿಯಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

rayanna
Published on

ಬೆಳಗಾವಿ: ಪೀರನವಾಡಿ ಗ್ರಾಮದ ಮುಖ್ಯ ಸರ್ಕಲ್​ನಲ್ಲಿ ಸ್ಥಳೀಯರ ವಿರೋಧದ ನಡುವೆಯೂ ರಾತ್ರೋರಾತ್ರಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.

ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಹಲವು ವರ್ಷಗಳಿಂದ ರಾಯಣ್ಣನ ಪರಮ ಭಕ್ತರು ಹೋರಾಟ ಮಾಡುತ್ತ ಬಂದಿದ್ದರು. ಪೀರನವಾಡಿ ಗ್ರಾಮದಲ್ಲಿ ತಾವು ಗುರುತಿಸಿದ ಸ್ಥಳದಲ್ಲೇ ಗುರುವಾರ ತಡರಾತ್ರಿ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ವಿಜಯೋತ್ಸವ ಆಚರಿಸಿದರು. ಪೀರನವಾಡಿಯಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಗುರವಾರ ದೊಡ್ಡ ಹೋರಾಟವೇ ನಡೆದಿತ್ತು. ಈ ಬಗ್ಗೆ ಆ.29ರಂದು ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ‌ ಮತ್ತು ಜಿಲ್ಲಾಡಳಿತ ಭರವಸೆ ನೀಡಿದ್ದರು. ಇದನ್ನೂ ಓದಿರಿ ಭಕ್ತರಿಗೆ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆಯಿಂದ ಗುಡ್ ನ್ಯೂಸ್

ಇತ್ತ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಕ್ಕೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಈ ವೃತ್ತದಲ್ಲಿ ಶಿವಾಜಿ ಮೂರ್ತಿ ಇದೆ. ಸಂಗೊಳ್ಳಿ ರಾಯಣ್ಣರ ಮೂರ್ತಿ ಪ್ರತಿಷ್ಠಾಪನೆಗೆ ವಿರೋಧ ಇಲ್ಲ, ಆದರೆ ಇದೇ ಸ್ಥಳದಲ್ಲೇ ಮಾಡಿದ್ದಕ್ಕಾಗಿ ವಿರೋಧ ಇದೆ ಎಂದು ಸ್ಥಳೀಯ ಮರಾಠಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಗೊಳ್ಳಿ ‌ರಾಯಣ್ಣ ಮೂರ್ತಿ‌ ಬಳಿಗೆ ಕನ್ನಡ ಹೋರಾಟಗಾರರೂ ಜಮಾಯಿಸಿದ್ದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net