ಸಂಗೊಳ್ಳಿ ರಾಯಣ್ಣ ಬದುಕು ಸ್ಫೂರ್ತಿದಾಯಕ: ಸಿಎಂ ಸಿದ್ದರಾಮಯ್ಯ ಬಣ್ಣನೆ

sanoglli
Published on

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದೆ. ಅವರ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 194ನೇ ಸ್ಮರಣೋತ್ಸವ ಅಂಗವಾಗಿ ನಗರದ ರೈಲ್ವೆ ನಿಲ್ದಾಣ ಮುಂಭಾಗ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಕಿತ್ತೂರು ರಾಣಿಚೆನ್ನಮ್ಮನವರ ಬಲಗೈ ಬಂಟನಾಗಿ ಹೋರಾಡಿದ ಸಂಗೊಳ್ಳಿ ರಾಯಣ್ಣ, ಅಪ್ರತಿಮ ದೇಶಭಕ್ತ. ಬ್ರಿಟಿಷರ ವಿರುದ್ಧ ಸೆಣೆಸಲು ಗೆರಿಲ್ಲಾ ಯುದ್ಧತಂತ್ರಗಾರಿಕೆ ಬಳಸಿದ್ದರು. ಭಾರತದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ರಾಯಣ್ಣ, ಕನ್ನಡದ ನಾಡು, ನುಡಿ,ನೆಲ, ಜಲಗಳಿಗೆ ಅತೀವ ಗೌರವ ನೀಡುತ್ತಿದ್ದರು. ಹೀಗಾಗಿ, ಅವರ ಬದುಕು ನಮಗೆಲ್ಲ ಸ್ಫೂರ್ತಿಯಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net