

ಸುಬ್ರಹ್ಮಣ್ಯ: ರೋಟರಿ ಕ್ಲಬ್ ಸುಬ್ರಹ್ಮಣ್ಯ ಹಾಗೂ ಬೆಂಗಳೂರು ಸೆಂಟ್ರಲ್ ರೋಟರಿ ಕ್ಲಬ್ ಆಶ್ರಯದಲ್ಲಿ ಸುಬ್ರಹ್ಮಣ್ಯ ಕುಮಾರಸ್ವಾಮಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಸ್ಯಾನಿಟರಿ ಪ್ಯಾಡ್ ಹಸ್ತಾಂತರ ಕಾರ್ಯಕ್ರಮ ಗುರುವಾರ ನಡೆಯಿತು.
ಹದಿಹರೆಯದ ವಿದ್ಯಾರ್ಥಿನಿಯರಿಗೆ ಆರೋಗ್ಯ ಸುರಕ್ಷತಾ ಮಾಹಿತಿ ಕಾರ್ಯಾಗಾರ ನೆರವೇರಿತು. ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ನಾಯರ್ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ಸೆಂಟ್ರಲ್ ರೋಟರಿ ಕ್ಲಬ್ ಅಧ್ಯಕ್ಷ ಶಿವಾನಂದ ಅವರು ಸ್ಯಾನಿಟರಿ ಪ್ಯಾಡ್ ವೆಂಡಿಂಗ್ ಮಷಿನನ್ನು ಮುಖ್ಯ ಶಿಕ್ಷಕಿ ವಿದ್ಯಾರತ್ನ ಎಚ್. ಅವರಿಗೆ ಹಸ್ತಾಂತರಿಸಿದರು. ಬೆಂಗಳೂರು ರೋಟರಿ ಕ್ಲಬ್ ಚೇರ್ಮನ್ ಸೌಮ್ಯಾ ಶ್ರೀಕಾಂತ್ ತರಬೇತಿ ನೀಡಿದರು.
ರೋಟರಿ ಜೋನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ, ನಿಯೋಜಿತ ಅಧ್ಯಕ್ಷ ಜಯಪ್ರಕಾಶ್ ಆರ್., ಕಾರ್ಯದರ್ಶಿ ಭವಾನಿ ಶಂಕರ ಪೈಲಾಜೆ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸಂಕೀರ್ತ ಹೆಬ್ಬಾರ್ ಮತ್ತಿತರರಿದ್ದರು. ಗೋಪಾಲ ಎಣ್ಣೆಮಜಲ್ ವಂದಿಸಿದರು.