ಪೌರಕಾರ್ಮಿಕರು ಆರೋಗ್ಯವಾಗಿದ್ದಲ್ಲಿ ಉತ್ತಮ ಜೀವನ ನಡೆಸಲು ಸಾಧ್ಯ; ಡಿಸಿ

MDK01
Published on

ಮಡಿಕೇರಿ: ಪೌರಕಾರ್ಮಿಕರು ಆರೋಗ್ಯಯುತರಾಗಿದ್ದಲ್ಲಿ ಉತ್ತಮ ಜೀವನ ನಡೆಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಕಿವಿಮಾತು ಹೇಳಿದರು.


ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಕಾರದಲ್ಲಿ ಮಡಿಕೇರಿ ನಗರಸಭೆ ವತಿಯಿಂದ ನಗರಸಭೆಯ ಪೌರಕಾರ್ಮಿಕರು ಹಾಗೂ ಸ್ವಚ್ಚತಾ ಸಿಬ್ಬಂದಿಗಳಿಗೆ ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಜಿಲ್ಲಾ ಆಸ್ಪತ್ರೆಯಲ್ಲಿ ಏರ್ಪಡಿಸಲಾಗಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದರು.


ಪ್ರತೀನಿತ್ಯ ನಗರ ಸ್ವಚ್ಚ ಮಾಡುವಲ್ಲಿ ಪೌರಕಾರ್ಮಿಕರು ಆರೋಗ್ಯವನ್ನು ಬದಿಗಿಟ್ಟು ಕಾರ್ಯನಿರ್ವಹಿಸುತ್ತಾರೆ. ಪೌರಕಾರ್ಮಿಕರು ಆರೋಗ್ಯಯುತರಾಗಿದ್ದಲ್ಲಿ ಉತ್ತಮ ಜೀವನ ನಡೆಸಲು ಸಾಧ್ಯ. ಆ ನಿಟ್ಟಿನಲ್ಲಿ ಆರೋಗ್ಯ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಸಲಹೆ ಮಾಡಿದರು.
ನಗರಸಭೆ ವತಿಯಿಂದ ೮೦ ಪೌರಕಾರ್ಮಿಕರು ಮತ್ತು ಸ್ವಚ್ಚತಾ ಸಿಬ್ಬಂದಿಗೆ ಆರೋಗ್ಯ ತಪಾಸಣೆ ಏರ್ಪಡಿಸಲಾಗಿದೆ. ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಡಾ.ಬಿ.ಸಿ.ಸತೀಶ ತಿಳಿಸಿದರು.


ಆರೋಗ್ಯ ತಪಾಸಣೆ ಸಂಬಂಧಿಸಿದಂತೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಂಜುಂಡಯ್ಯರವರು ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಕಾರ್ಯಪ್ಪ, ವೈದ್ಯಕೀಯ ಅಧೀಕ್ಷಕರಾದ ಡಾ.ರೂಪೇಶ್ ಗೋಪಾಲ್, ಡಾ.ಲೋಕೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಬಸಪ್ಪ, ಪೌರಾಯುಕ್ತ ವಿಜಯ, ನಗರಸಭೆ ಸದಸ್ಯರು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net