ಸಂಜಯ ಪಾಟೀಲ ಭಾವಚಿತ್ರಕ್ಕೆ ಸಗಣಿ ಎರಚಿ ಪ್ರತಿಭಟನೆ

23Jaggu4
ಮಾಜಿ ಶಾಸಕ ಸಂಜಯ ಪಾಟೀಲ ಭಾವಚಿತ್ರಕ್ಕೆ ಸಗಣಿ ಎರಚಿ ಕಾಂಗ್ರೆಸ್‌ನ ಮಹಿಳಾ ಘಟಕದಿಂದ ಬೆಳಗಾವಿಯಲ್ಲಿ ಪ್ರತಿಭಟಿಸಲಾಯಿತು. ಆಯೇಷಾ ಸನದಿ, ಕಸ್ತೂರಿ ಕೋಲ್ಕಾರ, ಫರೀದಾ ನದಾಫ್ ಇತರರಿದ್ದರು.
Published on

ಬೆಳಗಾವಿ: ಬಿಜೆಪಿ ಪ್ರತಿಭಟನೆ ವೇಳೆ ಮಾಜಿ ಶಾಸಕ ಸಂಜಯ ಪಾಟೀಲ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯವಾಗಿ ಮಾತನಾಡಿದ್ದಾರೆಂದು ಆರೋಪಿಸಿ ಕಾಂಗ್ರೆಸ್‌ನ ಮಹಿಳಾ ಘಟಕದಿಂದ ಶುಕ್ರವಾರ ನಗರದಲ್ಲಿ ಪ್ರತಿಭಟಿಸಲಾಯಿತು. ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸಂಜಯ ಪಾಟೀಲ ಅವರ ಭಾವಚಿತ್ರಕ್ಕೆ ಸಗಣಿ ಎರಚಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ, ಮಾಜಿ ಶಾಸಕ ಸಂಜಯ ಪಾಟೀಲ ಅವರು ಪ್ರತಿ ಬಾರಿಯಂತೆ ಈ ಬಾರಿಯೂ ನಾಲಿಗೆ ಹರಿಬಿಟ್ಟಿದ್ದಾರೆ.

ಮುಖ್ಯಮಂತ್ರಿಗಳ ವಿರುದ್ಧ ಮನಬಂದಂತೆ ಮಾತನಾಡುವುದು ಸರಿಯಲ್ಲ. ಮುಡಾಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಾಕ್ಷಿ ಇವೆಯೇ? ಸಾಕ್ಷಾೃಧಾರಗಳಿದ್ದರೆ ಸಾರ್ವಜನಿಕವಾಗಿ ಬಿಡುಗಡೆ ಮಾಡಿ ಎಂದು ಸವಾಲು ಹಾಕಿದರು. ಆಯೇಷಾ ಸನದಿ, ಕಸ್ತೂರಿ ಕೋಲ್ಕಾರ, ಫರೀದಾ ನದಾಫ್, ಮಂಜುಳಾ ಕಾಂಬಳೆ, ಶಾಂತಾ ಕಾಂಬಳೆ, ಶಾಹೀದಾ ಢಾಂಗೆ, ಭಾರತಿ ಢವಳೆ ಇತರರಿದ್ದರು.

ಸಮಜಾಯಿಸಿ ನೀಡಿದ ಮಾಜಿ ಶಾಸಕ: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಅವಾಚ್ಯವಾಗಿ ಮಾತನಾಡಲಾಗಿದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಸಿದ್ದರಾಮಯ್ಯ ನವರು, ದೇವೇಗೌಡರು, ಯೂಡಿಯೂರಪ್ಪನವರು ನಾಡಿನ ವರಿಷ್ಠ ನಾಯಕರು. ಅವರ ಬಗ್ಗೆ ಗೌರವವಿದೆ. ಮಾತನಾಡುವ ಭರದಲ್ಲಿ ತಪ್ಪು ಪದ ಬಳಸಿದ್ದರೆ ಕ್ಷಮೆ ಯಾಚಿಸುತ್ತೇನೆ. ಕಳೆದ ಬಾರಿಯೂ ಕಾಂಗ್ರೆಸ್ ಸರ್ಕಾರವಿರುವ ಕಾರಣ ದುಡ್ಡು ಪಡೆದು ಕೆಲ ಮಹಿಳೆಯರು ನಮ್ಮ ಮನೆ ಎದುರು ಪ್ರತಿಭಟಿಸಿದ್ದರು. ಈಗ ಕಾಂಗ್ರೆಸ್ ಸರ್ಕಾರ ಪೊಲೀಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಮಾಜಿ ಶಾಸಕ ಸಂಜಯ ಪಾಟೀಲ ಆರೋಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net