ಮೂಡ್ಲಕಟ್ಟೆಯಲ್ಲಿ ಸಂಕಲ್ಪ್ ಫ್ರೆಶರ್ಸ್ ಡೇ

gan (4)
Published on

ಕುಂದಾಪುರ: ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಗಳಿಗಾಗಿ ‘ಸಂಕಲ್ಪ್-2025’ ಫ್ರೆಶರ್ಸ್ ಡೇ ನಡೆಯಿತು.

ಕಾಲೇಜು ಪ್ರಾಂಶುಪಾಲೆ ಡಾ.ಪ್ರತಿಭಾ ಎಂ.ಪಟೇಲ್ ಕಾರ್ಯಕ್ರಮ ಉದ್ಘಾಟಿಸಿದರು. ಹಿರಿಯ ವಿದ್ಯಾರ್ಥಿಗಳು ಸಂಗೀತ, ನೃತ್ಯ, ಮನೋರಂಜನೆಯಿಂದ ತುಂಬಿದ ಸಾಂಸ್ಕೃತಿಕ ಚಟುವಟಿಕೆ ಆಯೋಜಿಸುವ ಮೂಲಕ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿಗಳನ್ನು ಸಕ್ರಿಯವಾಗಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು, ದಿನವನ್ನು ಸ್ಮರಣೀಯವಾಗಿಸಲು ವಿವಿಧ ಆಟ, ಚಟುವಟಿಕೆ ಹಮ್ಮಿಕೊಳ್ಳಲಾಗಿತ್ತು. ಪ್ರಥಮ ಬಿಸಿಎ ವಿದ್ಯಾರ್ಥಿ ಮೇಘರಾಜನನ್ನು ‘ರಾಜಕುಮಾರ’, ಪ್ರಥಮ ಬಿಸಿಎ ವಿದ್ಯಾರ್ಥಿನಿ ಮೌಲ್ಯ, ‘ರಾಜಕುಮಾರಿ’ ಎಂದು ಆಯ್ಕೆಯಾದರು.

ಉಪ ಪ್ರಾಂಶುಪಾಲರು, ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ, ಬಿಸಿಎ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು, ತೃತೀಯ ಬಿಸಿಎ, ದ್ವಿತೀಯ ಬಿಸಿಎ ವಿದ್ಯಾರ್ಥಿ ಪ್ರತಿನಿಧಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಶಿಫಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net