

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ರಾಷ್ಟ್ರೊತ್ಥಾನ ವಿದ್ಯಾ ಕೇಂದ್ರದಲ್ಲಿ ಮಾ. 18ರಂದು ಮಧ್ಯಾಹ್ನ 3.30ಕ್ಕೆ 2024-25ನೇ ಸಾಲಿನ 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳ ಸಂಕಲ್ಪೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶ್ರೀಕ್ಷೇತ್ರ ಇಂಚಲದ ಶ್ರೀ ಶಿವಾನಂದ ಭಾರತಿ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಶ್ರೀ ಪೂರ್ಣಾನಂದ ಭಾರತಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ರಾಷ್ಟ್ರೊತ್ಥಾನ ವಿದ್ಯಾ ಕೇಂದ್ರದ ಕಾರ್ಯದರ್ಶಿ ರಾಘವೇಂದ್ರ ಅಂಬೇಕರ ಅಧ್ಯಕ್ಷತೆ ವಹಿಸುವರು. ಆಡಳಿತಾಧಿಕಾರಿ ಕುಮಾರಸ್ವಾಮಿ ಕುಲಕರ್ಣಿ, 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು, ಇತರರು ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ವೇದ ಘೋಷ, ಭಗವದ್ಗೀತೆ ಪಠಣ, ಸಂಕಲ್ಪ ಬೋಧನೆ, ತಂದೆ-ತಾಯಿಯ ಪಾದ ಪೂಜೆ, ಇತರ ಕಾರ್ಯಕ್ರಮಗಳು ನಡೆಯಲಿವೆ ಎಂದು ವಿದ್ಯಾ ಕೇಂದ್ರದ ಪ್ರಾಚಾರ್ಯೆ ಡಾ. ಅನಿತಾ ರೈ. ತಿಳಿಸಿದ್ದಾರೆ.