ಮಾದಪ್ಪನ ಸನ್ನಿಧಿಯಲ್ಲಿ ಶಂಕರ ಬಿದರಿ ಪೂಜೆ

ಮಾದಪ್ಪನ ಸನ್ನಿಧಿಯಲ್ಲಿ ಶಂಕರ ಬಿದರಿ ಪೂಜೆ
Published on

ಹನೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಗೆ ಭಾನುವಾರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷರೂ ಆದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಡಾ. ಶಂಕರ ಬಿದರಿ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಬೆಳಗ್ಗೆ 10ಕ್ಕೆ ಮಹಾಸಭಾದ ಪದಾಧಿಕಾರಿಗಳು ಹಾಗೂ ಸಮುದಾಯದ ಮುಖಂಡರೊಂದಿಗೆ ಮ.ಬೆಟ್ಟಕ್ಕೆ ಭೇಟಿ ನೀಡಿದ ಅವರು, ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿದರು. ಈ ವೇಳೆ ಮ.ಬೆಟ್ಟದ ಅಭಿವೃದ್ಧಿಯ ಬಗ್ಗೆ ಮಾಹಿತಿ ಪಡೆದರು. ಬಳಿಕ ಸಾಲೂರು ಬೃಹನ್ಮಠಕ್ಕೆ ತೆರಳಿ ಗದ್ದುಗೆಯ ದರ್ಶನ ಪಡೆದು ಹಿರಿಯ ಶ್ರೀ ಪಟ್ಟದ ಗುರುಸ್ವಾಮೀಜಿ ಅವರ ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆದರು. ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಅವರಿಂದಲೂ ಆರ್ಶೀವಾದ ಪಡೆದು ಶ್ರೀಮಠದ ಸಾಮಾಜಿಕ, ಶೈಕ್ಷಣಿಕ ಪ್ರಗತಿಯ ಬಗ್ಗೆ ಮಾಹಿತಿ ತಿಳಿದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗುಂಡೇಗಾಲ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಮೂಡ್ನಾಪುರ ನಂದೀಶ್, ತಾಲೂಕು ಘಟಕದ ಅಧ್ಯಕ್ಷ ಸೋಮಶೇಖರ್, ಮುಖಂಡ ಡಾ.ಪ್ರೀತನ್ ನಾಗಪ್ಪ, ಪೊನ್ನಾಚಿ ಮಹದೇವಸ್ವಾಮಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net