ಸಾಂಕ್ರಾಮಿಕ ರೋಗಗಳ ವಿರುದ್ಧ ಮುಂಜಾಗ್ರತೆ

sankramika
Published on

ಕುಶಾಲನಗರ:

ಸಾಂಕ್ರಾಮಿಕ ರೋಗ ಹರಡುವ ಭೀತಿ ಹಿನ್ನೆಲೆಯಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಸುಂದರನಗರದಲ್ಲಿ ಪಂಚಾಯಿತಿ ವತಿಯಿಂದ ಕ್ರಮ ಕೈಗೊಳ್ಳಲಾಯಿತು.

ಸುಂದರನಗರದ ಅಂಗನವಾಡಿ, ಸಮುದಾಯ ಭವನದ ಬಳಿ ಸೊಳ್ಳೆಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬAದಿದ್ದು ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಯಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಸುಂದರನಗರ ಅಂಗನವಾಡಿ, ಸಮುದಾಯ ಭವನ ಹಾಗೂ ಸೊಳ್ಳೆಗಳು ಉತ್ಪತ್ತಿಯಾಗುವ ಸ್ಥಳಗಳಲ್ಲಿ ಬ್ಲೀಚಿಂಗ್ ಪೌಡರ್ ಸಿಂಪಡಿಸಲಾಯಿತು.

ಬ್ಲೀಚಿಂಗ್ ಪೌಡರ್ ಸಿಂಪಡಿಸುವ ಸಂದರ್ಭ ಪೌರ ಕಾರ್ಮಿಕರೊಂದಿಗೆ ವಾರ್ಡ್ ಸದಸ್ಯ ಕೆ.ಬಿ. ಶಂಶುದ್ಧೀನ್ ಕೈಜೋಡಿಸಿದರು. ಈ ಸಂದರ್ಭ ಮಾತನಾಡಿದ ಕೆ.ಬಿ. ಶಂಶುದ್ಧೀನ್, ಮಳೆಗಾಲದ ಸಂದರ್ಭ ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಡಂಘಿ ಮಾದರಿಯ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿರುವುದರಿಂದ ಅಂಗನವಾಡಿ, ಸಮುದಾಯ ಭವನ ಹಾಗೂ ಇನ್ನಿತರ ಕಡೆಗಳಲ್ಲಿ ಬ್ಲೀಚಿಂಗ್ ಪೌಡರ್ ಹಾಕಲಾಗಿದೆ. ಸಾರ್ವಜನಿಕರು ತಮ್ಮ ಆರೋಗ್ಯ ದೃಷ್ಟಿಯಿಂದ ತಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭ ನೀರು ಗಂಟಿ ಕುಮಾರ್, ಪೌರಕಾರ್ಮಿಕರಾದ ನಾಗರಾಜ್, ಪುಟ್ಟಮ್ಮ ಹಾಗೂ ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net