

ಮದ್ದೂರು: ಪಟ್ಟಣದ ಲಿಟ್ಲ್ ಪ್ಲವರ್ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಸಂಕ್ರಾಂತಿ ಸುಗ್ಗಿ ಸಂಭ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಂಗವಾಗಿ ಭತ್ತ ರಾಶಿ, ರಾಸುಗಳಿಗೆ, ಕಬ್ಬು ಸೇರಿದಂತೆ ಇನ್ನಿತರ ಬೆಳೆಗಳಿಗೆ ಪೂಜೆ ಮಾಡಿ ಸಂಕ್ರಾಂತಿ ಹಬ್ಬವನ್ನು ವಿದ್ಯಾರ್ಥಿಗಳು ಸಡಗರ, ಸಂಭ್ರಮದಿಂದ ಆಚರಿಸಿದರು.
ಸಂಸ್ಥೆಯ ಅಧ್ಯಕ್ಷ ರೇಣುಕುಮಾರ್ ಮಾತನಾಡಿ, ಸಂಕ್ರಾಂತಿ ರೈತರಿಗೆ ಸುಗ್ಗಿಯ ಹಬ್ಬವಾಗಿದ್ದು, ತಾವು ಕಷ್ಟಪಟ್ಟು ಬೆಳೆದ ಬೆಳೆಗಳನ್ನು ಮಾರಾಟ ಮಾಡುವುದು ಹಾಗೂ ಮನೆಗೆ ತೆಗೆದುಕೊಂಡು ಹೋಗುವುದು ವಾಡಿಕೆ. ಇಂತಹ ಹಬ್ಬದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಡುವ ಉದ್ದೇಶದಿಂದ ಪ್ರತಿ ವರ್ಷ ನಮ್ಮ ಶಾಲೆಯಲ್ಲಿ ಸಂಕ್ರಾಂತಿ ಸಂಭ್ರಮ ಆಚರಣೆ ಮಾಡಲಾಗುತ್ತಿದೆ ಎಂದರು.
ವಿದ್ಯಾರ್ಥಿಗಳು ನಡೆಸಿಕೊಟ್ಟ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮ ನೋಡುಗರ ಗಮನ ಸೆಳೆಯಿತು. ಸಂಸ್ಥೆಯ ಕಾರ್ಯದರ್ಶಿ ಶ್ರುತಿ, ಸಹ ಶಿಕ್ಷಕರಾದ ರೂಪಾ, ಭಾವನಾ, ನಾಗವೇಣಿ, ರಚನಾ, ಸವಿತಾ, ಚೈತ್ರಾ ಸೇರಿದಂತೆ ಇತರರು ಹಾಜರಿದ್ದರು.