ಜ.14ರಂದು ದೇವಲಾಪುರದಲ್ಲಿ ಸಂಕ್ರಾಂತಿ ಸಂಭ್ರಮ: ವಿವಿಧ ಕಾರ್ಯಕ್ರಮ ಆಯೋಜನೆ

07_01_Mdy_03(A(Minister N.Cheluvarayaswamy)
Published on

ನಾಗಮಂಗಲ: ಸಂಕ್ರಾಂತಿ ಹಬ್ಬದ ಅಂಗವಾಗಿ ಜ.14ರಂದು ತಾಲೂಕಿನ ದೇವಲಾಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.

ಮಧ್ಯಾಹ್ನ 2.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಜಿಲ್ಲಾಧಿಕಾರಿ ಡಾ.ಕುಮಾರ ನೇತೃತ್ವದಲ್ಲಿ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ವಿವಿಧ ಧಾನ್ಯಗಳು, ಕೃಷಿ ಸಲಕರಣೆಗಳ ಪ್ರದರ್ಶನ, ಕಬಡ್ಡಿ ಮತ್ತು ಕುಸ್ತಿ ಪಂದ್ಯಾವಳಿ, ಮಿಶ್ರತಳಿ ಹೆಣ್ಣು ಕರುಗಳ ಪ್ರದರ್ಶನ, ಕಡಲೆಕಾಯಿ ಪರಿಷೆ, ಅವರೆಕಾಯಿ ಪರಿಷೆ, ಬೆಲ್ಲದ ಪರಿಷೆ, ನಾಗಮಂಗಲ ಬೆಣ್ಣೆ ಪರಿಷೆಯ ಜತೆ ಕೃಷಿ ಇಲಾಖೆ ಮಳಿಗೆ ಮತ್ತು ಇಲಾಖಾ ಯೋಜನೆಗಳ ಪ್ರದರ್ಶನ, ಫಲ ಪುಷ್ಪ ಪ್ರದರ್ಶನ ಹಾಗೂ ಆಹಾರ ಮಳಿಗೆ ತೆರೆಯಲಾಗುತ್ತಿದೆ.

ಸಂಜೆ 6.20ಕ್ಕೆ ಸಚಿವ ಎನ್.ಚಲುವರಾಯಸ್ವಾಮಿ ಗೋಪೂಜೆ ಮತ್ತು ಕಿಚ್ಚು ಹಾಯಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. 6.30ರಿಂದ ವೇದಿಕೆ ಕಾರ್ಯಕ್ರಮ ಆರಂಭವಾಗಲಿದ್ದು, ವಾಗ್ಮಿ ಪ್ರೊ.ಎಂ.ಕೃಷ್ಣೇಗೌಡ ಹಾಗೂ ರಿಚರ್ಡ್ ಲೂಯಿಸ್ ತಂಡದಿಂದ ನಗೆ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. ಸಂಜೆ 7.30 ರಿಂದ 9.30ರ ವರೆಗೆ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net