

ಮುಧೋಳ: ಸಂಕ್ರಾಂತಿ ಎಂದರೆ ಸಮೃದ್ಧಿಯ ಸಂಕೇತವಾಗಿದ್ದು, ಸೂರ್ಯ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನತ್ತ ಹೊರಳುವ ಮೂಲಕ ಹೊಸತನಕ್ಕೆ ತೆರೆದುಕೊಳ್ಳಲು ಇಡೀ ಜೀವಕೋಟಿಗೆ ಪ್ರೇರಣೆ ನೀಡುವ ಹಬ್ಬವಾಗಿದೆ ಎಂದು ನಿವೃತ್ತ ಉಪನ್ಯಾಸಕಿ ವಿಜಯಾ ಹಂಗರಗಿ ಹೇಳಿದರು.
ನಗರದ ತ್ರಿವೇಣಿ ಶಿಕ್ಷಣ ಸಂಸ್ಥೆಯ ಸಂಗಮನಾಥ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಸಿಬಿಎಸ್‌ಇ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಂಕ್ರಾಂತಿ ಸಂಭ್ರಮ-2025ಕ್ಕೆ ಚಾಲನೆ ನೀಡಿ ಮಾತನಾಡಿದರು.
ನಮ್ಮ ಪರಂಪರೆ, ಸಂಸ್ಕೃತಿ ಉಳಿವಿಗೆ ಹಬ್ಬಗಳ ಮಹತ್ವ ಅರಿತು ಆಚರಿಸಿ ಮುಂದಿನ ಪೀಳಿಗೆಗೆ ದಾಟಿಸಬೇಕು ಎಂದು ಮುಖ್ಯಶಿಕ್ಷಕ ವೆಂಕಟೇಶ ಗುಡೆಪ್ಪನವರ ಹೇಳಿದರು.
ಕಬ್ಬು, ಜೋಳದ ರಾಶಿ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.
ತ್ರಿವೇಣಿ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ನಿರ್ಮಲಾ ಎಸ್.ಮಲಘಾಣ, ಸಪ್ತಸ್ವರ ಸಂಗೀತ ಸಂಸ್ಥೆ ಅಧ್ಯಕ್ಷೆ ಜ್ಯೋತಿ ಪಾಟೀಲ್, ಶ್ರೀದೇವಿ ಅಂಗಡಿ, ರುಕ್ಮವ್ವ ಚಿಕ್ಕೂರ, ಕಮಲಾ ಕುಬಸದ, ಸುನಿತಾ ಪಾಟೀಲ್, ಆಡಳಿತಾಧಿಕಾರಿ ಮಲ್ಲು ಕಳ್ಳೆನವರ, ಪ್ರಾಚಾರ್ಯ ಸುರೇಶ ಭಜಂತ್ರಿ ಇದ್ದರು.