ಸರ್ಕಾರಿ ಪ್ರೌಢಶಾಲೆಯಲ್ಲಿ ಸಂಕ್ರಾಂತಿ ಕವಿಗೋಷ್ಠಿ

SR PATNA 1
ಬಾಬುರಾಯನಕೊಪ್ಪಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಸಿ.ಜೆ.ಶ್ರೀನಿವಾಸ್ ಉದ್ಘಾಟಿಸಿದರು. ರಾಮಚಂದ್ರು, ಎಸ್.ಕುಮಾರ್, ಸಂದೇಶ್ ಇದ್ದರು.
Published on

ಶ್ರೀರಂಗಪಟ್ಟಣ: ಸುಗ್ಗಿ-ಕವಿತೆ ರೈತರ ಬದುಕಿಗೆ ಭರವಸೆಯಾಗುವುದರ ಜತೆಗೆ ಕಲುಷಿತ ಸಮಾಜದ ನ್ಯೂನತೆಗಳನ್ನು ತಿದ್ದುವಂತಿರಬೇಕು ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿ.ಜೆ.ಶ್ರೀನಿವಾಸ್ ಹೇಳಿದರು.

ತಾಲೂಕಿನ ಬಾಬುರಾಯನಕೊಪ್ಪಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಿದ್ದ ಸಂಕ್ರಾಂತಿ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು. ಈ ಹಿಂದೆ ಸಮಾಜದಲ್ಲಿನ ನ್ಯೂನತೆ ಹಾಗೂ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಶಕ್ತಿ ಕವಿಗಳು ಹಾಗೂ ಸಾಹಿತಿಗಳಿಗಿತ್ತು. ಆದರೆ ಆ ಮನಸ್ಥಿತಿ ಹಾಗೂ ಅಂತಹ ವ್ಯಕ್ತಿತ್ವ ಪ್ರಸ್ತುತ ಯುವ ಕವಿ ಮನಸ್ಸುಗಳಲ್ಲಿ ಮೂಡದಿರುವುದು ಬೇಸರ ತರಿಸಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್‌ನ ತಾಲೂಕು ಅಧ್ಯಕ್ಷ ಬಲ್ಲೇನಹಳ್ಳಿ ಮಂಜುನಾಥ್ ಮಾತನಾಡಿದರು. ಕವಿ ಕೊತ್ತತ್ತಿ ರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಹಾಪ್‌ಕಾಮ್ಸ್ ನಿರ್ದೇಶಕ ರಾಮಚಂದ್ರು, ತಾಪಂ ಮಾಜಿ ಅಧ್ಯಕ್ಷ ಸಂದೇಶ್, ಸಮಾಜ ಸೇವಕ ಡಿ.ಎಂ.ರವಿ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಎಸ್.ಕುಮಾರ್, ಕಸಾಪ ಕಾರ್ಯದರ್ಶಿ ಧನಂಜಯ್ಯ, ದರಸಗುಪ್ಪೆ ಲೋಕೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net