ಸಿಇಟಿ ಸಾಧಕನಿಗೆ ಸನ್ಮಾನ

sanmana
Published on

ಕುಶಾಲನಗರ:

ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯದಲ್ಲಿ 875ನೇ ಸ್ಥಾನ ಗಳಿಸಿದ ಕುಶಾಲನಗರ ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿ ಕೌಶಿಕ್‌ನನ್ನು ವಿದ್ಯಾಸಂಸ್ಥೆಯ ಪರವಾಗಿ ಮಂಗಳವಾರ ಸನ್ಮಾನಿಸಿ ಗೌರವಿಸಲಾಯಿತು. ವಿವೇಕಾನಂದ ವಿದ್ಯಾಸಂಸ್ಥೆ ಅಧ್ಯಕ್ಷ ಎನ್. ಎನ್. ಶಂಭುಲಿAಗಪ್ಪ ಮತ್ತು ವಿವೇಕಾನಂದ ಪಿಯು ಕಾಲೇಜು ಪ್ರಾಂಶುಪಾಲರಾದ ಕ್ಲಾರಾ ರೇಷ್ಮಾ ಉಪಸ್ಥಿತಿಯಲ್ಲಿ ವಿದ್ಯಾರ್ಥಿಯ ಪೋಷಕರೊಂದಿಗೆ ಸಾಧಕ ವಿದ್ಯಾರ್ಥಿಯನ್ನು ಸನ್ಮಾನ ಮಾಡಲಾಯಿತು.

ವಿವೇಕಾನಂದ ಪಿಯು ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಈ ಸಾಲಿನ ಪರೀಕ್ಷೆಯಲ್ಲಿ ಶೇಕಡ 96 ಅಂಕ ಪಡೆದಿರುವ ಕೌಶಿಕ್ ಉತ್ತಮ ಸಾಧನೆ ಗಳಿಸಿರುವ ಬಗ್ಗೆ ಸಂಸ್ಥೆಯ ಅಧ್ಯಕ್ಷ ಶÀಂಭುಲಿAಗಪ್ಪ ಸಂತಸ ವ್ಯಕ್ತಪಡಿಸಿ ಶುಭ ಕೋರಿದರು. ಉನ್ನತ ವ್ಯಾಸಂಗಕ್ಕೆ ಸಂಸ್ಥೆಯ ಮೂಲಕ ಸಹಾಯ ಹಸ್ತ ನೀಡುವ ಭರವಸೆ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಕೌಶಿಕ್ ತಾನು ಇಂಜಿನಿಯರಿAಗ್ ವಿಭಾಗದಲ್ಲಿ ಉನ್ನತ ಮಟ್ಟದ ಶಿಕ್ಷಣ ಪಡೆಯುವ ಗುರಿ ಹೊಂದಿರುವುದಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಸ್ಥೆಯ ಆಡಳಿತ ಅಧಿಕಾರಿ ಮಹೇಶ್ ಅಮೀನ್, ಎಂಜಿಎA ಪದವಿ ಕಾಲೇಜಿನ ಪ್ರಾಂಶುಪಾಲರಾದ ಟಿ ಎ ಲಿಖಿತಾ, ಬೋಧಕ ಬೋಧಕೇತರ ಸಿಬ್ಬಂದಿಗಳು ಇದ್ದರು. ಕೌಶಿಕ್ ಕುಶಾಲನಗರ ಗೊಂದಿಬಸವನಹಳ್ಳಿಯ ನಿವಾಸಿ ಆಟೋ ಚಾಲಕ ಗಂಗರಾಜು ಮತ್ತು ಲತಾಮಣಿ ದಂಪತಿ ಪುತ್ರ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net