ಕೊಡಗಿನ ಗೌಡ ಸಮಾಜಗಳಿಂದ ಶಾಸಕದ್ವಯರಿಗೆ ಅಭಿನಂದನಾ ಸಮಾರಂಭ

Untitled
Published on

ಮಡಿಕೇರಿ:

ಕೊಡಗು ಗೌಡ ಸಮಾಜ, ಮಡಿಕೇರಿ ಗೌಡ ಸಮಾಜ ಮತ್ತು ಜಿಲ್ಲೆಯ ಎಲ್ಲಾ ಗೌಡ ಸಮಾಜಗಳ ಸಂಘಟನೆಗಳ ಸಹಯೋಗದಲ್ಲಿ ಜು.೨೮ ರಂದು ಶಾಸಕದ್ವಯರಿಗೆ ಅಭಿನಂದನಾ ಸಮಾಂಭ ಆಯೋಜಿಸಲಾಗಿದೆ ಎಂದು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಆರ್.ಸೋಮಣ್ಣ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶುಕ್ರವಾರ ಬೆಳಗ್ಗೆ ೯.೩೦ ಗಂಟೆಗೆ ಮಡಿಕೇರಿಯ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಹೇಳಿದ್ದಾರೆ.

ಅಭಿವೃದ್ಧಿಪರ ಚಿಂತನೆಯ ಇಬ್ಬರು ಉತ್ಸಾಹಿ ಶಾಸಕರುಗಳು ಹೊಸ ಭರವಸೆಯನ್ನು ಮೂಡಿಸಿದ್ದು, ಇವರುಗಳನ್ನು ಗೌಡ ಜನಾಂಗದ ಮೂಲಕ ಅಭಿನಂದಿಸಿ ಮತ್ತಷ್ಟು ಪ್ರೋತ್ಸಾಹ ನೀಡುವ ಅಗತ್ಯವಿದೆ. ಆದ್ದರಿಂದ ಅಭಿನಂದನಾ ಸಮಾರಂಭದಲ್ಲಿ ಎಲ್ಲಾ ಗೌಡ ಸಮಾಜಗಳ ಮತ್ತು ಸಂಘಟನೆಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಜನಾಂಗ ಬಾಂಧವರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸೂರ್ತಲೆ ಸೋಮಣ್ಣ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net