ತಂದೆ-ತಾಯಿ, ಗುರುಗಳಿಗೆ ಗೌರವ ನೀಡಿ

17-sanshi- kle colege
Published on

ಸಂಶಿ: ವಿದ್ಯಾರ್ಥಿಗಳು ತಂದೆ-ತಾಯಿ, ಗುರುಗಳಿಗೆ ಗೌರವ ನೀಡುವುದನ್ನು ರೂಢಿಸಿಕೊಳ್ಳಬೇಕು. ಈ ಮೂಲಕ ಭಾರತೀಯ ಸಂಸ್ಕೃತಿ ಉಳಿಸಲು ಕಂಕಣಬದ್ಧರಾಗಬೇಕು ಎಂದು ಕುಂದಗೋಳ ಕಲ್ಯಾಣಪುರಮಠದ ಶ್ರೀ ಅಭಿನವ ಬಸವಣ್ಣಜ್ಜನವರು ಹೇಳಿದರು.
ಗ್ರಾಮದ ಕೆಎಲ್ಇ ಸಂಸ್ಥೆಯ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯ, ಕಲಾ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯ ಸಂಶಿ ಹಾಗೂ ಹುಬ್ಬಳ್ಳಿ-ಧಾರವಾಡ ನಾಗರಿಕ ಪರಿಸರ ಸಮಿತಿ ಆಶ್ರಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಮತ್ತು ಪ್ರಸಕ್ತ ಸಾಲಿನ ಕ್ರೀಡಾ, ಸಾಂಸ್ಕೃತಿಕ ಹಾಗೂ ಎನ್‌ಎಸ್‌ಎಸ್ ಚಟುವಟಿಕೆಗಳ ಉದ್ಘಾಟನೆ ಸಮಾರಂಭದಲ್ಲಿ ಶ್ರೀಗಳು ಮಾತನಾಡಿದರು.
ಡಾ. ಪಿ.ಎಸ್. ಹಳ್ಯಾಳ ಮಾತನಾಡಿ, ವಿದ್ಯಾರ್ಥಿಗಳು ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆ ಅಭ್ಯಸಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಇದರಿಂದ ಉನ್ನತ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಶಂಕರ ಕುಂಬಿ, ಪರಿಸರ ಸಂರಕ್ಷಣೆ ಮತ್ತು ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.
ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಎ.ಬಿ. ಉಪ್ಪಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸದಸ್ಯ ಬಿ.ಬಿ. ಬೂದಿಹಾಳ, ಎಚ್.ಎನ್. ಪಾಟೀಲ, ಬಿ.ವಿ. ಸೈಬಣ್ಣವರ, ಬಿ.ಎಂ. ಕಜ್ಜಿ, ಆರ್.ಜಿ. ಮಣಕಟ್ಟಿ, ಎನ್.ಬಿ. ಹೂಗಾರ, ಸಿ.ಎಸ್. ಗುರುಮಠ, ಎಸ್.ಪಿ. ಬಾವಿ ಉಪಸ್ಥಿತರಿದ್ದರು.
ಪ್ರೊ. ರಮೇಶ ಅತ್ತಿಗೇರಿ, ಎಂ.ಸಿ. ಅಂಗಡಿ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net