ಅಕ್ರಮ-ಸಕ್ರಮ ಯೋಜನೆ ಅನುಷ್ಠಾನಕ್ಕೆ ಯತ್ನ

16-sanshi-mr patil
Published on

ಸಂಶಿ: ಗ್ರಾಮದ ಅಭಿವೃದ್ಧಿಗೆ ನಾನು ಸದಾ ಸಿದ್ಧ. ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ಅಕ್ರಮ-ಸಕ್ರಮ ಯೋಜನೆ ಅನುಷ್ಠಾನ ಕುರಿತು ಅಧಿಕಾರಿಗಳಿಂದ ವರದಿ ಪಡೆದು ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಶಾಸಕ ಎಂ.ಆರ್. ಪಾಟೀಲ ಹೇಳಿದರು. ಗ್ರಾಮದ ಗ್ರಾಪಂ ಕಚೇರಿ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಪಂ ಅಧ್ಯಕ್ಷ ರಾಜೀವ ಪುಟ್ಟಣ್ಣವರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಎಂ.ಆರ್. ಪಾಟೀಲ ಹಾಗೂ ಹುಬ್ಬಳ್ಳಿ ಸೆಂಟ್ರಲ್ ಶಾಸಕ ಮಹೇಶ ಟೆಂಗಿನಕಾಯಿ ಅವರನ್ನು ಸನ್ಮಾನಿಸಲಾಯಿತು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಮತಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ, ಧಾರವಾಡ ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ಕುಂದಗೋಳಮಠ, ಎನ್.ಎನ್. ಪಾಟೀಲ, ಡಿ.ವೈ. ಲಕ್ಕನಗೌಡರ, ಭರಮಪ್ಪ ಮುಗಳಿ, ಗೌರಮ್ಮ ಬಸವರಾಜ ಹರಕುಣಿ, ಬಸವರಾಜ ದ್ಯಾವನೂರ, ಪಕ್ಕಜ್ಜ ಕೋರಿ, ಪ್ರಕಾಶಗೌಡ ಪಾಟೀಲ, ಗೋವಿಂದಗೌಡ ಕೌಜಗೇರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net