

ಹೊನ್ನಾವರ: ಸಕಲ ಭಾಷೆಯ ಮೂಲವೇ ಸಂಸ್ಕೃತವಾಗಿದೆ. ಇದು ಪ್ರತಿಯೊಬ್ಬರೂ ಅಧ್ಯಯನ ಮಾಡಲೇಬೇಕಾದ ಭಾಷೆ ಎಂದು ಸಂಸ್ಕೃತ ವಿದ್ವಾಂಸ, ಕೊಳಲು ವಾದಕ ಶಂಭು ಭಟ್ ಕಡತೋಕ ಹೇಳಿದರು.
ತಾಲೂಕಿನ ಕವಲಕ್ಕಿಯ ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ‘ಸಂಸ್ಕೃತ ಸಪ್ತಾಹ’ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಒಳಿತಿಗಾಗಿ ಒಂದಾಗಿ ಬದುಕಬೇಕು, ಬದುಕಿ ಸಾಧನೆ ಮಾಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ವಿ.ಜಿ. ಹೆಗಡೆ ಗುಡ್ಗೆ ಮಾತನಾಡಿ, ಸಂಸ್ಕೃತ ಅಧ್ಯಯನದಿಂದ ನೆನಪಿನ ಶಕ್ತಿ ವೃದ್ಧಿಸುತ್ತದೆ, ಜ್ಞಾನವೂ ಹೆಚ್ಚಾಗುತ್ತದೆ ಎನ್ನುವುದನ್ನು ವಿದೇಶಿ ತಜ್ಞರೂ ಒಪ್ಪಿಕೊಂಡಿದ್ದಾರೆ. ಸಂಸ್ಕೃತವನ್ನು ಮನೆಮನೆಗೂ ತಲುಪಿಸುವ ಕೆಲಸವಾಗಬೇಕು ಎಂದರು. ಆಡಳಿತಾಧಿಕಾರಿ ಎಂ.ಎಸ್. ಹೆಗಡೆ ಗುಣವಂತೆ, ಮುಖ್ಯ ಶಿಕ್ಷಕಿ ವೈಲೆಟ್ ಫರ್ನಾಂಡಿಸ್, ಇತರರು ಉಪಸ್ಥಿತರಿದ್ದರು. ವಿದ್ಯಾರ್ಥಿ ವಿಂಧ್ಯಾ ಹೆಗಡೆ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಶಿಕ್ಷಕಿ ಅಂಜನಾ ಶೆಟ್ಟಿ ಹಾಗೂ ಸೌಮ್ಯಾ ಹೆಗಡೆ ಕಾರ್ಯಕ್ರಮ ನಿರ್ವಹಿಸಿದರು.