

ಧಾರವಾಡ: ಜನತಾ ದರ್ಶನದಲ್ಲಿ ಜಿಲ್ಲೆಯ ನಗರ, ಗ್ರಾಮೀಣ ಪ್ರದೇಶಗಳ ಸಾರ್ವಜನಿಕರಿಂದ ೧೯೭ ಅಹವಾಲುಗಳು ಸಲ್ಲಿಕೆಯಾಗಿವೆ. ನಿಯಮಾನುಸಾರ ಪರಿಶೀಲಿಸಿ, ಇತ್ಯರ್ಥಪಡಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭರವಸೆ ನೀಡಿದರು.
ನಗರದ ಸೃಜನಾ ರಂಗಮ೦ದಿರದಲ್ಲಿ ಸೋಮವಾರ ಆಯೋಜಿಸಿದ್ದ ಜನತಾ ದರ್ಶನದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಕಂದಾಯ ಇಲಾಖೆಗೆ ಸಂಬ೦ಧಿಸಿದ ೫೭, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ೨೫, ಮಹಾನಗರ ಪಾಲಿಕೆಯ ೫೫ ಹಾಗೂ ಇತರ ಇಲಾಖೆಗಳ ೬೦ ಸೇರಿ ೧೯೭ ಅರ್ಜಿ ಸ್ವೀಕರಿಸಲಾಗಿದೆ. ವಸತಿ, ಪೋಡಿ, ವಾಟ್ನಿ, ಹೊಲಗಳಿಗೆ ದಾರಿ ಹಾಗೂ ವೈಯಕ್ತಿಕ ಸಮಸ್ಯೆಗಳ ಅರ್ಜಿ ಬಂದಿವೆ. ಅವುಗಳನ್ನು ಸಂಬ೦ಧಿಸಿದ ಇಲಾಖೆ ಅಽಕಾರಿಗಳು ಪರಿಶೀಲಿಸಿ, ಇತ್ಯರ್ಥ ಮಾಡಲಿದ್ದಾರೆ. ಸರ್ಕಾರದ ಹಂತದಲ್ಲಿ ಆಗಬೇಕಾದ ಇತ್ಯರ್ಥಗಳನ್ನು ಸರ್ಕಾರಕ್ಕೆ ಕಳುಹಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಭೂಮಾಫಿಯಾ ಮತ್ತು ಡ್ರಗ್ಸ್ ಮಾಫಿಯಾ ತಡೆಗಟ್ಟಲು ಪೊಲೀಸ್ ಇಲಾಖೆ ಅಽಕಾರಿಗಳು ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಇತ್ತಿಚೆಗೆ ಧಾರವಾಡದಲ್ಲಿ ಅನಽಕೃತವಾಗಿ ಮನೆ ನೆಲಸಮಗೊಳಿಸಿದ ಪ್ರಕರಣಕ್ಕೆ ಸಂಬ೦ಧಿಸಿ ಓರ್ವನನ್ನು ಬಂಽಸಿ, ಜೆಸಿಬಿ ಜಪ್ತಿ ಮಾಡಲಾಗಿದೆ ಎಂದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಸ್ವಾಗತಿಸಿದರು. ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಡಾ. ಗೋಪಾಲ ಬ್ಯಾಕೋಡ, ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಡಿಎಫ್‌ಒ ಸೋನಲ್ ವೃಷ್ಣಿ, ಮಾಜಿ ಸಂಸದ ಪ್ರೊ. ಐ.ಜಿ. ಸನದಿ ಹಾಗೂ ಅಽಕಾರಿಗಳಿದ್ದರು.