

ಕೋಟ: ಒರ್ವ ವ್ಯಕ್ತಿ ಸಾಮಾಜಿಕ ಚಟುವಟಿಕೆ ಮೂಲಕ ಈ ಸಮಾಜಕ್ಕೆ ತನ್ನದೇ ಆದ ಕೊಡುಗೆ ನೀಡಿ ಜನ ಸಾಮಾನ್ಯರ ಮನಸ್ಸು ಗೆದ್ದಿದ್ದಾರೆ. ಪಂಚವರ್ಣ ಸಂಘಟನೆ ನಿರಂತರ ನಡೆಸುವ ಪರಿಸರ ಸ್ನೇಹಿ ಕಾರ್ಯಕ್ರಮ ಒರ್ವ ಸದಸ್ಯನಿಗೆ ಸಮರ್ಪಿಸಿದ ರೀತಿ ನಿಜಕ್ಕೂ ಶ್ಲಾಘನೀಯ ಎಂದು ಕೋಟದ ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಸತೀಶ್ ಎಚ್.ಕುಂದರ್ ಹೇಳಿದರು. ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಮಣೂರು ್ರೆಂಡ್ಸ್, ಕೋಟ ಹಂದಟ್ಟು ಮಹಿಳಾ ಬಳಗ, ಕೋಟ ಜೆಸಿಐ ಸಿನಿಯರ್ ಲಿಜನ್ ಸಹಯೋಗದೊಂದಿಗೆ 268ನೇ ಭಾನುವಾರದ ಪರಿಸರಸ್ನೇಹಿ ಹಸಿರುಜೀವ ಕಾರ್ಯಕ್ರಮವನ್ನು ಇತ್ತೀಚೆಗೆ ನಿಧನರಾದ ಸಂಘದ ಸದಸ್ಯ ಸಂತೋಷ್ ಮೇಷ್ಟ್ರಿಗೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೋಟ ರಾಷ್ಟ್ರೀಯ ಹೆದ್ದಾರಿ ಹಲವು ಭಾಗಗಳಲ್ಲಿ ಗಿಡ ನೆಡಲಾಯಿತು. ನೆಟ್ಟ ಗಿಡಗಳ ಆರೈಕೆಯ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕೋಟ ಗ್ರಾಪಂ ಸದಸ್ಯ ಅಜಿತ್ ದೇವಾಡಿಗ, ಪಂಚವರ್ಣದ ಉಪಾಧ್ಯಕ್ಷರಾದ ದಿನೇಶ್ ಆಚಾರ್, ಸಂತೋಷ್ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಜೆಸಿಐ ಕೋಟ ಸೀನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್, ಪಂಚವರ್ಣ ಮಹಿಳಾ ಮಂಡಲ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಇದ್ದರು. ಸಲಹಾ ಸಮಿತಿ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು. ಮಣೂರು ಗೀತಾನಂದ ೌಂಡೇಶನ್, ಪೇತ್ರಿ ಅನ್ನಪೂರ್ಣ ನರ್ಸರಿ, ಬ್ರಹ್ಮಾವರ ಸುವರ್ಣ ಎಂಟಪ್ರೈಸ್, ಸಮುದ್ಯತಾ ಕೋಟ ಗಿಡ ನೀಡಿ ಸಹಕರಿಸಿತು.