ಭೀಕರ ಅಪಘಾತಕ್ಕೆ 10ಕ್ಕೂ ಅಧಿಕ ವಾಹನ ಪುಡಿ

WhatsApp Image 2024-05-27 at 18.33.19_5b0b0039
Published on

ಪುತ್ತೂರು: ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು ೧೦ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.೨೭ರಂದು ಸಂಜೆ ನಡೆದಿದೆ.

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ ೧೦ ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಜಖಂ ಗೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net