ಸಮಾನತೆ ಸಾರಿದವರು ಅಂಬೇಡ್ಕರ

bkt-15-1
ಬಾಗಲಕೋಟೆ ಜಿಲ್ಲಾಡಳಿತ ಭವನದ ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರಿಗೆ ಸಂವಿಧಾನ ಪೀಠಿಕೆಯ ಫಲಕವನ್ನು ಹಸ್ತಾಂತರಿಸಿದರು.
Published on

ಬಾಗಲಕೋಟೆ: ದೇಶಕ್ಕೆ ಬೃಹತ್ ಪ್ರಮಾಣದ ಸಂವಿಧಾನವನ್ನು ನೀಡುವ ಮೂಲಕ ಸಮಾನತೆಯನ್ನು ಸಾರಿದವರು ಡಾ.ಬಿ.ಆರ್.ಅಂಬೇಡ್ಕರ ಎಂದು ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ ಹೇಳಿದರು.

ಜಿಲ್ಲಾಡಳಿತ ಭವನದ ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸಂವಿಧಾನ ಪೀಠಿಕೆ ಓದುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡ ಭಾರತ ಇಂದು ಪ್ರಜಾಪ್ರಭುತ್ವದ ಅತೀ ದೊಡ್ಡ ದೇಶವಾಗಿದ್ದು, ಅಂಬೇಡ್ಕರ ಹಾಕಿಕೊಟ್ಟ ಹಾದಿಯನ್ನು ನಾವೆಲ್ಲರೂ ನಡೆಯಬೇಕಿದೆ ಎಂದರು.

ಸಂಸದ ಪಿ.ಸಿ.ಗದ್ದಿಗೌಡರ ಮಾತನಾಡಿ ದೇಶಕ್ಕೆ ಅರ್ಥಪೂರ್ಣವಾದ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ ನೀಡಿದ್ದು, ಅದರಲ್ಲಿ ಅಡಕವಾಗಿರುವ ಆಶಯ, ಅದರ ಹಿಂದೆ ಇರುವ ಸಮಾಜಿಕ ಕಳಕಳಿ, ಸಮಾನತೆ, ಭಾತೃತ್ವ ಸೇರಿದಂತೆ ಹತ್ತು ಹಲವಾರು ಮೌಲ್ಯಗಳನ್ನು ನಾವೆಲ್ಲರೂ ಅನುಸರಿಬೇಕು ಎಂದು ಹೇಳಿದರು.

ನಮ್ಮ ದೇಹ ಪ್ರಜಾಪ್ರಭುತ್ವಕ್ಕೆ ಬಹಳಷ್ಟು ಮಹತ್ವ ಕೊಟ್ಟಿದ್ದು, ಮುಂದಿನ ಪೀಳಿಗೆಯ ನಮ್ಮ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸಂಪೂರ್ಣವಾಗಿ ತಿಳಿಸುವಂತಹ ಈ ಕಾರ್ಯಕ್ರಮ ಮಹತ್ವವವನ್ನು ಪಡೆದಿದೆ. ನಮಗೆ ನೀಡಿರುವಂತ ಹಕ್ಕು ಮತ್ತು ಕರ್ತವ್ಯಗಳನ್ನು ಅರ್ಥಮಾಡಿಕೊಂಡು ನಡೆದಲ್ಲಿ ಪ್ರಜಾಪ್ರಭುತ್ವಕ್ಕೆ ಗೌರವ ತಂದುಕೊಟ್ಟಂತಾಗುತ್ತದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಮ್ಮದೇ ಆಗಿರುವಂತಹ ಕರ್ತವ್ಯಗಳು ನಮ್ಮ ಆಡಳಿತ ಅದರ ಜೊತೆಗೆ ಬದುಕುನಲ್ಲಿರುವ ಅಸಮಾನತೆಯನ್ನು ಹೋಗಲಾಡಿಸಿ ನ್ಯಾಯಯುತವಾಗಿ ಬದುಕಬೇಕಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯ ಫಲಕವನ್ನು ಶಾಸಕ ಎಚ್.ವೈ.ಮೇಟಿ ಅವರು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು. ಮುಖ್ಯಮಂತ್ರಿಗಳು ವಿಧಾನಸೌಧದ ಎದುರು ಜರುಗಿದ ನೇರ ಪ್ರಸಾರದ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ವಾಚನ ಮಾಡಲಾಯಿತು. ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಜಿ.ಪಂ ಸಿಇಒ ಶಶಿಧರ ಕುರೇರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿ.ಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಮರಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಸಂಜೀವ ನಡುವಿನಮನಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net