ನ.೧ರಂದು ಪ್ರತ್ಯೇಕ ರಾಜ್ಯ ಧ್ವಜಾರೋಹಣ

2710 KLB 05
M S Patil Naribol
Published on

ಕಲಬುರಗಿ : ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯಿಸಿ ನ.೧ರಂದು ಕರ್ನಾಟಕ ರಾಜ್ಯೊತ್ಸವ ಬಹಿಷ್ಕರಿಸಿ ಪ್ರತ್ಯೇಕ ರಾಜ್ಯದ ಧ್ವಜಾರೋಹಣ ನೆರವೇರಿಸಲಾಗುವುದು ಎಂದು ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ ಎಂ.ಎಸ್. ಪಾಟೀಲï ನರಿಬೋಳ ತಿಳಿಸಿz್ದÁರೆ.

ಸರ್ಕಾರಗಳು ಕಕ ಭಾಗದ ಅಭಿವೃದ್ಧಿ ನಿರ್ಲಕ್ಷಿಸಿವೆ. ಈ ಭಾಗಕ್ಕೆ ಕೇಂದ್ರವೂ ಅನುದಾನ ನೀಡಬೇಕು ಎಂದು ಆಗ್ರಹಿಸಿ ನಗರದ ಸರದಾರ ವಲ್ಲಭ ಭಾಯಿ ಪಟೇಲ್ ವೃತ್ತದಲ್ಲಿ ಅಂದು ಬೆಳಗ್ಗೆ ೮ ಗಂಟೆಗೆ ಪ್ರತ್ಯೇಕ ಧ್ವಜಾರೋಹಣ ಮಾಡಲು ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಂವಿಧಾನ ೩೭೧ (ಜೆ) ವಿರೋಧಿಸಿಸುವ ಶಕ್ತಿಗಳನ್ನು ಮಟ್ಟ ಹಾಕದೆ ಸರ್ಕಾರ ಕೈ ಕಟ್ಟಿ ಕುಳಿತಿರುವುದು ಖಂಡನಿಯ. ನೆಪ ಮಾತ್ರಕ್ಕೆ ಕಲಬುರಗಿಯಲ್ಲಿ ಸಂಪುಟ ಸಭೆ ಜನರಿಗೆ ಖುಷಿಪಡಿಸಿದರೆ ಹೊರತು ಕೆಲಸಗಳು ಆಗುತ್ತಿಲ್ಲ. ಹೀಗಾಗಿ ಸರ್ಕಾರಕ್ಕೆ ಚುರುಕು ಮುಟ್ಟಿಸಲು ಹೋರಾಟ ತೆಲಂಗಾಣ ಮಾದರಿಯ ಅನಿವಾರ್ಯ ಎಂದು ನರಿಬೋಳ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net