ಮಂಡ್ಯ ಕ್ಷೇತ್ರಕ್ಕೆ ಸಾರಾ ಉಸ್ತುವಾರಿ

Published on

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯ ಕ್ಷೇತ್ರಕ್ಕೆ ಮಾಜಿ ಸಚಿವ ಸಾ.ರಾ.ಮಹೇಶ್ ಅವರನ್ನು ಉಸ್ತುವಾರಿ ನಾಯಕರನ್ನಾಗಿ ನೇಮಕ ಮಾಡಿರುವ ನಿಟ್ಟಿನಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಅಭಿನಂದನೆ ತಿಳಿಸಿದ್ದಾರೆ.

ಸಾ.ರಾ.ಮಹೇಶ್ ಅವರು ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಮಾಡಿದ್ದಾರೆ. ಪಕ್ಷ ನಿಷ್ಠೆಯಿಂದ ಹಲವು ವರ್ಷಗಳಿಂದ ಹಗಲಿರುಳು ಎನ್ನದೆ ದುಡಿಯುತ್ತಿದ್ದಾರೆ. ಜೆಡಿಎಸ್ ಪಕ್ಷವನ್ನು ಸರಿಯಾಗಿ ಮುನ್ನೆಡೆಸಿ, ಹಳೇ ಮೈಸೂರು ಭಾಗದಲ್ಲಿ ಕಾರ್ಯಕರ್ತರ ಪಡೆಯನ್ನೆ ಕಟ್ಟಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರ ಇಂಡಿಯಾದಲ್ಲೇ ವಿಭಿನ್ನವಾಗಿದೆ. ಘಟಾನುಘಟಿ ನಾಯಕರ ಸೋಲು-ಗೆಲುವಿಗೆ ಈ ಕ್ಷೇತ್ರ ಸಾಕ್ಷಿಯಾಗಿದೆ. ಈ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಸಲುವಾಗಿ ಅತ್ಯುತ್ತಮ ಸಂಘಟಕ ಹಾಗೂ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಒಬ್ಬ ನಾಯಕನ ಅಗತ್ಯವಿತ್ತು. ಇಂತಹ ಸನ್ನಿವೇಶದಲ್ಲಿ ಸಾ.ರಾ.ಮಹೇಶ್ ಅವರಂತ ರಾಜಕೀಯ ತಂತ್ರಗಾರನನ್ನು ಈ ಕ್ಷೇತ್ರಕ್ಕೆ ಆಯ್ಕೆ ಮಾಡಿರುವುದು ಉತ್ತಮ ಕೆಲಸವಾಗಿದೆ. ಸಾ.ರಾ.ಮಹೇಶ್ ಅವರ ನೇಮಕದಿಂದ ನಮ್ಮ ಅಭ್ಯರ್ಥಿಯ ಗೆಲುವಿಗೆ ಪೂರಕವಾಗಿದ್ದು, ಜಯ ನಿಶ್ಚಿತವಾಗಿದೆ ಎಂದು ಅವರು ಅಭಿಪ್ರಾಯತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net