ಮೈಸೂರಿನಲ್ಲಿ ಶಾರದಾದೇವಿ ಜಯಂತಿ

Published on

ಮೈಸೂರು: ಪ್ರಜ್ಞಾವಂತ ನಾಗರಿಕ ವೇದಿಕೆ ಹಾಗೂ ಶಾರದಾದೇವಿ ನಾಗರಿಕರ ಹಿತರಕ್ಷಣಾ ವೇದಿಕೆ ವತಿಯಿಂದ ಶಾರದಾದೇವಿನಗರ ವೃತ್ತದಲ್ಲಿ ಬುಧವಾರ ಶ್ರೀ ಶಾರದಾದೇವಿ 171ನೇ ಜಯಂತಿ ಆಚರಿಸಲಾಯಿತು.

ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ಮಾತನಾಡಿ, ತಮ್ಮ ಸಾಧನೆ, ತ್ಯಾಗ ಮತ್ತು ಪರಿಶ್ರಮದಿಂದ ಶ್ರೀ ರಾಮಕೃಷ್ಣ ಪರಮಹಂಸ ಹಾಗೂ ಸ್ವಾಮಿ ವಿವೇಕಾನಂದರನ್ನು ಆಧ್ಯಾತ್ಮಿಕವಾಗಿ ಬೆಳೆಸಿದ ಮಹಾನ್‌ಶಕ್ತಿ ಶ್ರೀ ಶಾರದಾದೇವಿ ಎಂದು ಬಣ್ಣಿಸಿದರು.

ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಬಿ.ಎಂ. ರಘು ಮಾತನಾಡಿ, ವಿವೇಕಾನಂದನಗರ, ರಾಮಕೃಷ್ಣನಗರದ ವೃತ್ತಗಳಲ್ಲಿರುವಂತೆ ಶಾರದಾದೇವಿನಗರದಲ್ಲಿ ಶ್ರೀ ಶಾರದಾಮಾತೆಯ ಪ್ರತಿಮೆ ನಿರ್ಮಾಣವಾಗಬೇಕು. ಆ ಮೂಲಕ ಈ ಮೂವರು ಮಹನೀಯರ ಕೊಡುಗೆಯನ್ನು ಶಾಶ್ವತವಾಗಿ ನೆನೆಯುವ ಕಾರ್ಯ ಆಗಬೇಕು ಎಂದು ಹೇಳಿದರು.

ಸಮಾಜಸೇವಕ ಕೆ. ರಘುರಾಮ್ ವಾಜಪೇಯಿ ಮಾತನಾಡಿ, ಇಂದಿನ ಪೀಳಿಗೆಗೆ ಶ್ರೀ ಶಾರದಾದೇವಿ ಅವರ ಬದುಕು, ತತ್ವ, ಸಂದೇಶ ಮತ್ತು ಆದರ್ಶಗಳು ದಾರಿ ದೀಪವಾಗಬೇಕು ಎಂದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಮಡ್ಡಿಕೆರೆ ಗೋಪಾಲ್, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೋಳ ಜಗದೀಶ್, ಜೀವದಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net