ಮದ್ಯ ಸೇವಿಸಲು ಹಣ ಸಿಗಲಿಲ್ಲವೆಂದು ಆತ್ಮಹತ್ಯೆ

JDG
Published on

ರಾಣೆಬೆನ್ನೂರ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕವಲೆತ್ತು ಗ್ರಾಮದಲ್ಲಿ ಭಾನುವಾರ ನಡೆದಿದೆ.
ಗ್ರಾಮದ ಭೀಮೇಶ ನಿಂಗಪ್ಪ ಮರಾಠ (34) ಮೃತ ವ್ಯಕ್ತಿ.
ಈತ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ. ಇತ್ತೀಚೆಗೆ ಕುಡಿಯಲು ಹಣವಿಲ್ಲದ ವಿಚಾರವಾಗಿ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕುಮಾರಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net