

ಮಂಗಳೂರು: ಸರೋಜಿನಿ ಮಧುಸೂದನ ಕುಶೆ ಸಂಸ್ಥೆಯಲ್ಲಿ ಮೇಧಾ ಯೋಗ ಕಾರ್ಯಕ್ರಮದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುವ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ಜರುಗಿತು.
ಪ್ರಾಂಶುಪಾಲ ಬಿಂದುಸಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕುಶೆ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉನ್ನತ ಪ್ರಜೆಯಾಗಿ ಹೊರಹೊಮ್ಮುವುದರಲ್ಲಿ ಸಂಶಯವಿಲ್ಲ. ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಉತ್ತಮ ಫಲಿತಾಂಶ ದಾಖಲಾಗಿರುವುದು ಶ್ಲಾಘನೀಯ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್‌ನ ಜೀವನ ಕೌಶಲ್ಯ ಮತ್ತು ಧ್ಯಾನ ಈ ವಿಷಯದಲ್ಲಿ ಹಿರಿಯ ತರಬೇತುದಾರೆ ಅನುಷಾ ಆನಂದ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಆತ್ಮವಿಶ್ವಾಸವನ್ನು ಹೇಗೆ ಬೆಳೆಸಿಕೊಳ್ಳಬೇಕು, ಓದಿನಲ್ಲಿ ಏಕಾಗ್ರತೆ, ಸಮಯ ಪ್ರಜ್ಞೆಯನ್ನು ಹೇಗೆ ಆಳವಡಿಸಿಕೊಳ್ಳಬೇಕು ಎಂಬುದನ್ನು ತಿಳಿಸಿಕೊಟ್ಟರು. ಒತ್ತಡವನ್ನು ಎದುರಿಸಿ ಜೀವನದಲ್ಲಿ ಹೇಗೆ ಯಶಸ್ಸನ್ನು ಗಳಿಸಬಹುದು ಎಂಬುದನ್ನು ವಿವರಿಸಿದರು.
ವಿದ್ಯಾಸಂಸ್ಥೆಯ ಎಒ ಮುರಳೀಧರ್ ರಾವ್ ಉಪಸ್ಥಿತರಿದ್ದು, ಶುಭಹಾರೈಸಿದರು. ಶಾಲಾ ಶಿಕ್ಷಕಿ ರೇಶ್ಮಾ ಸ್ವಾಗತಿಸಿದರು. ಜಯಲಕ್ಷ್ಮೀ ನಿರೂಪಿಸಿದರು. ಉಪನ್ಯಾಸಕಿ ಪುಷ್ಪ ವಂದಿಸಿದರು.