

ಹರಪನಹಳ್ಳಿ : ಹಿಂದು-ಮುಸ್ಲಿಂ ಸಮುದಾಯಗಳು ಒಗ್ಗೂಡಿ ಸರ್ವ ಧರ್ಮ ಸಮ್ಮೇಳನ ಯಶಸ್ವಿಗೊಳಿಸಬೇಕು ಎಂದು ಅರಸೀಕೆರೆ ಕೋಲಶಾಂತೇಶ್ವರ ಮಠದ ಶಾಂತಲಿಂಗ ದೇಶೀಕೇಂದ್ರ ಸ್ವಾಮೀಜಿ ತಿಳಿಸಿದರು.
ತಾಲೂಕಿನ ಅರಸೀಕೆರೆ ಗ್ರಾಮದಲ್ಲಿ ಫೆ.1 ರಿಂದ 3ರವರೆಗೆ ನಡೆಯಲಿರುವ ಸರ್ವಧರ್ಮ ಸಮ್ಮೇಳನ ಕಾರ್ಯಕ್ರಮಕ್ಕೆ ಅರಸೀಕೆರೆ ಗ್ರಾಮದ ಮುಸ್ಲಿಂ ಸಮುದಾಯದವರಿಗೆ ಶನಿವಾರ ಆಮಂತ್ರಣ ನೀಡಿ ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲರೂ ಒಂದೇ ಎನ್ನುವ ಭಾವನೆಯನ್ನು ಹೊಂದಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು. ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ವೈ ಡಿ ಅಣ್ಣಪ್ಪ ಮಾತನಾಡಿ, ಕಾರ್ಯಕ್ರಮದಲ್ಲಿ ನಾಡಿನ ಪ್ರತಿಷ್ಠಿತ ಮಠಗಳಿಂದ 130 ಮಠಾಧೀಶರು ಆಗಮಿಸುತ್ತಿದ್ದಾರೆ. ಅದು ನಮ್ಮ ಗ್ರಾಮದ ಪುಣ್ಯ. ಎಲ್ಲಾ ಸಮುದಾಯದವರು ಒಗ್ಗೂಡಿ ಕಾರ್ಯಕ್ರಮ ಯಶಸ್ವಿಗೊಳಿಸೋಣ ಎಂದರು.