

ಮಾನ್ವಿ: ಟ್ರಸ್ಟ್ ಬಡ ವಿದ್ಯಾರ್ಥಿಗಳಿಗೆ, ವಯೋವೃದ್ಧರಿಗೆ ಹಾಗೂ ಬಡವರಿಗೆ ಹಲವು ವರ್ಷಗಳಿಂದ ಸಹಾಯ ಮಾಡುತ್ತಿರುವುದು ಶ್ಲಾಘನೀಯ ಎಂದು ಗ್ರೇಡ್-2 ತಹಸೀಲ್ದಾರ್ ಅಬ್ದುಲ್ ವಾಹೀದ್ ಹೇಳಿದರು.
ಪಟ್ಟಣದ ಬ್ರಾಹ್ಮಣವಾಡಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರೃ ದಿನಾಚರಣೆಯ ಅಂಗವಾಗಿ ಸರ್ವಧರ್ಮ ಸೇವಾ ವೆಲ್ಫೇರ್ ಟ್ರಸ್ಟ್ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಸಾಮಾಗ್ರಿ ಕಿಟ್ ಹಾಗೂ ವಯೋವೃದ್ಧರಿಗೆ ಸ್ಟಿಕ್‌ನ್ನು ವಿತರಣಾ ಕಾರ್ಯಕ್ರಮದಲ್ಲಿ ಗುರುವಾರ ಮಾಡಿ ಮಾತನಾಡಿದರು. ಸಹಾಯದ ಮನೋಭಾವನೆಯನ್ನು ಎಲ್ಲರೂ ಬೆಳಸಿಕೊಳ್ಳಬೇಕು ಎಂದರು.