ಮಡಿಕೇರಿಯಲ್ಲಿ ಸರ್ವಜ್ಞ, ಛತ್ರಪತಿ ಶಿವಾಜಿ ಜಯಂತಿ

Sarvajna, Chhatrapati Shivaji Jayanti in Madikeri
Published on

ಮಡಿಕೇರಿ:

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಂತಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ನಗರದ ಗಾಂಧಿ ಭವನದಲ್ಲಿ ಮಂಗಳವಾರ ಆಚರಿಸಲಾಯಿತು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಸಂತಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿ, ಸಂತ ಕವಿ ಶ್ರೇಷ್ಠ ದಾರ್ಶನಿಕ ಕವಿ ಸರ್ವಜ್ಞ ಅವರು ಕನ್ನಡದಲ್ಲಿ ತ್ರಿಪದಿ ಸಾಲುಗಳ ಪದ್ಯ ಬರೆಯುವ ಮೂಲಕ ಮನೆ ಮಾತಾಗಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜರು ಮಹಾರಾಷ್ಟçದ ಪುಣೆ ಬಳಿಯ ಶಿವನೇರಿ ಗ್ರಾಮದಲ್ಲಿ ಜನಿಸಿ ಭಾರತ ರಾಷ್ಟç ನಿರ್ಮಾಣಕ್ಕೆ ಹೋರಾಡಿದ್ದಾರೆ. ಕವಿ ಸರ್ವಜ್ಞ ಮತ್ತು ಛತ್ರಪತಿ ಶಿವಾಜಿ ಮಹಾರಾಜರು ಜನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಈ ಎಲ್ಲಾ ಮಹನೀಯರ ಜೀವನ ಸಂದೇಶಗಳನ್ನು ತಿಳಿದುಕೊಂಡು ಮುಖ್ಯವಾಹಿನಿಗೆ ಬರುವಂತಾಗಬೇಕು ಎಂದರು.

ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಅಧ್ಯಾಪಕ ಎಂ.ಎನ್. ವೆಂಕಟನಾಯಕ್ ಮಾತನಾಡಿ ಕವಿ ಸರ್ವಜ್ಞ ಅವರು ಹಾವೇರಿ ಜಿಲ್ಲೆಯ ಹಿರೇಕೆರೂರು ಅಂಬಲೂರುನಲ್ಲಿ ಜನಿಸಿದರು.
ಸಾವಿರಕ್ಕೂ ಹೆಚ್ಚು ತ್ರಿಪದಿಗಳನ್ನು ಬರೆದಿದ್ದಾರೆ. ಇವರ ಬರಹಗಳು ಇಂದಿಗೂ ಸಹ ಪ್ರಸ್ತುತವಾಗಿದೆ. ಜನ ಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಅದ್ಭುತ ತ್ರಿಪದಿಗಳನ್ನು ರಚಿಸಿದ್ದಾರೆ. ಕವಿ ಸರ್ವಜ್ಞ ಅವರ ಪದ್ಯಗಳನ್ನು ಮಕ್ಕಳಿಗೆ ತಿಳಿಸಬೇಕು. ಕವಿ ಸರ್ವಜ್ಞ ಅವರು ಕನ್ನಡ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ತ್ರಿಪದಿ ಸಾಲುಗಳ ಮೂಲಕ ವೈಚಾರಿಕತೆ ಮತ್ತು ವೈಜ್ಞಾನಿಕತೆ ಮೂಲಕ ಜಾಗೃತಿ ಮೂಡಿಸಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜರು ರಾಷ್ಟçದಲ್ಲಿ ತಮ್ಮದೇ ಆದ ಪ್ರಭಾವ ಬೀರಿ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. 17 ನೇ ಶತಮಾನದಲ್ಲಿ ಶಿವಾಜಿ ಪೂರ್ವ ಭಾರತದಲ್ಲಿ ರಾಜ್ಯಭಾರ ಮಾಡುತ್ತಿದ್ದರು. ಅವರ ತಾಯಿ ಜೀಜಾ ಮಾತೆ ಶಿವಾಜಿಗೆ ಸಣ್ಣ ವಯಸ್ಸಿನಿಂದಲೂ ನಾಮಜಪವನ್ನು ಮಾಡಿಸುತ್ತಿದ್ದರು. ಒಬ್ಬ ರಾಜನಿಗೆ ಬೇಕಾದ ಎಲ್ಲಾ ಯುದ್ಧ ಕಲೆಗಳನ್ನು ಜೀಜಾಮಾತೆ ಕಲಿಸುತ್ತಿದ್ದರು ಎಂದರು.

ಕುಲಾಲ, ಕುಂಬಾರ, ಮಡಿಕೆ ತಯಾರಕರ ಸಂಘದ ಜಿಲ್ಲಾ ಅಧ್ಯಕ್ಷ ಕೆ.ಪಿ.ದಿನೇಶ್ ಮಾತನಾಡಿ ಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಅವರ ವಿಚಾರಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು. ಕವಿ ಸರ್ವಜ್ಞರು ಜನ ಸಾಮಾನ್ಯರಿಗೆ ಒಪ್ಪಿಗೆ ಆಗುವ ರೀತಿಯಲ್ಲಿ ತ್ರಿಪದಿಗಳನ್ನು ಬರೆದು ಜಾಗೃತಿ ಮೂಡಿಸಿದ್ದಾರೆ ಎಂದು ಹೇಳಿದರು.

ಮರಾಠ ಸಮಾಜದ ಜಿಲ್ಲಾಧ್ಯಕ್ಷ ಎಸ್.ಆರ್. ಅರುಣ್ ರಾವ್ ಮಾತನಾಡಿ ಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಮಹಾರಾಜರು ಸಮಾಜಕ್ಕೆ ನೀಡಿರುವ ಸಂದೇಶಗಳನ್ನು ತಿಳಿದುಕೊಳ್ಳುವಂತಾಗಬೇಕು.

ಛತ್ರಪತಿ ಶಿವಾಜಿ ಮಹಾರಾಜರು ಮಹಿಳೆಯರಿಗೆ ಸಮಾನ ಅವಕಾಶ ಮತ್ತು ರಕ್ಷಣೆಗೆ ಒತ್ತು ನೀಡಿದ್ದರು. ಶಿವಾಜಿ ಮಹಾರಾಜರು ಹಿಂದೂ ಸಾಮ್ರಜ್ಯದ ದೊರೆಯಾಗಿದ್ದಾರೆ ಎಂದರು.

ಕುಂಬಾರ ಕುಲಾಲ ಸಂಘದ ಮಾಜಿ ಅಧ್ಯಕ್ಷÀ ನಾಣಯ್ಯ, ಪ್ರಮುಖರಾದ ಕುಶಾಲಪ್ಪ, ಚಂದ್ರಶೇಖರ್, ದಾಮೋದರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ನಿವೃತ್ತ ಅಧ್ಯಾಪಕ ಬಿ.ಸಿ.ಶಂಕರಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಣಜೂರು ಮಂಜುನಾಥ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net