ಸರ್ವಜ್ಞರ ಆದರ್ಶ ಜೀವನದಲ್ಲಿ ಪಾಲನೆ - ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಹೇಳಿಕೆ

PTR_20 FEB_1
Published on

ಪುತ್ತೂರು: ಉತ್ತಮ ನಾಯಕತ್ವ ಗುಣವನ್ನು ಹಾಗೂ ಆಡಳಿತ ನಡೆಸುವ ಕ್ರಮವನ್ನು ಶಿವಾಜಿಯಿಂದ ಕಲಿಯಬೇಕು. ಇವತ್ತಿನ ಕಾಲಘಟ್ಟಕ್ಕೂ ಅನ್ವಯವಾಗುವ ಸರ್ವಜ್ಞರ ಆದರ್ಶ ಜೀವನದಲ್ಲಿ ಪಾಲಿಸಬೇಕು. ಕಚೇರಿಗೆ ಕೆಲಸಕ್ಕಾಗಿ ಬರುವ ಜನರಿಗೆ ಸಾಧ್ಯವಷ್ಟು ಉತ್ತಮ ರೀತಿಯಲ್ಲಿ ಸ್ಪಂದಿಸುವ ಕಾರ್ಯವಾಗಬೇಕು ಎಂದು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಹೇಳಿದರು.

ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ಪುತ್ತೂರು ತಾಲೂಕು ಕುಲಾಲ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಸಂತ ಕವಿ ಸರ್ವಜ್ಞ ಜಯಂತಿ ಮತ್ತು ಛತ್ರಪತಿ ಶಿವಾಜಿ ಜಯಂತಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ತಹಸೀಲ್ದಾರ ಪುರಂದರ ಹೆಗ್ಡೆ ಮಾತನಾಡಿ, ಮಹಾತ್ಮರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕಾರ್ಯವಾಗಬೇಕು ಎಂದು ತಿಳಿಸಿದರು.

ಪುತ್ತೂರು ನಿವೃತ್ತ ಶಿಕ್ಷಕಿ ಶುಭಲತಾ ಹಾರಾಡಿ ಸಂಸ್ಮರಣಾ ಉಪನ್ಯಾಸ ನೀಡಿದರು. ಪುತ್ತೂರು ತಾಲೂಕು ಕುಲಾಲ ಸಮಾಜ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕುಲಾಲ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ತಾಲೂಕು ವೈದ್ಯಾಽಕಾರಿ ಡಾ. ದೀಪಕ್ ರೈ ಮತ್ತಿತರರು ಉಪಸ್ಥಿತರಿದ್ದರು.

ಆಂಗ್ಲ ಭಾಷೆಯಲ್ಲೇ ಮಾತು

ಉತ್ತರ ಕನ್ನಡ ನಗರಾಭಿವೃದ್ಧಿ ಕೋಶದ ಯೋಜನಾಽಕಾರಿಯಾಗಿದ್ದವರು ಪುತ್ತೂರು ಸಹಾಯಕ ಆಯುಕ್ತರಾಗಿ ಆಗಮಿಸಿದ್ದಾರೆ. ಕರ್ನಾಟಕದಲ್ಲಿ ಸೇವೆ ಸಲ್ಲಿಸಬೇಕಾದ ಅಽಕಾರಿಗಳು ಕನ್ನಡದ ಬಗ್ಗೆ ಸರಿಯಾಗಿ ಜ್ಞಾನವನ್ನು ಹೊಂದಿರಬೇಕೆಂಬ ನಿಯಮವಿದೆ. ಕವಿ ಸರ್ವಜ್ಞರ ಕುರಿತಾಗಿ ಆಂಗ್ಲ ಭಾಷೆಯಲ್ಲೇ ಮಾತನಾಡಿದ್ದಾರೆ.

ಕಾರ್ಯಕ್ರಮದಲ್ಲಿ ನಿರಾಸಕ್ತಿ:

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದವರು ಮಾಹಾನ್ ವ್ಯಕ್ತಿಗಳ ಜೀವನದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದರೆ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ತಹಸೀಲ್ದಾರ್ ಮೊಬೈಲ್‌ನಲ್ಲೇ ಕಾಲಕಳೆಯುತ್ತಿದ್ದರು. ಸಹಾಯಕ ಆಯುಕ್ತರಿಗೆ ಒಮ್ಮೆ ಕಾರ್ಯಕ್ರಮ ಮುಗಿದರೆ ಸಾಕೆಂಬ ಚಡಪಡಿಕೆ ಎದ್ದು ಕಾಣುತ್ತಿತ್ತು. ಒಟ್ಟಿನಲ್ಲಿ ಕಾಟಾಚಾರಕ್ಕೆ ಕಾರ್ಯಕ್ರಮ ಮಾಡುವ ಸ್ಥಿತಿ ನಿರ್ಮಾಣವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net