ಸರ್ವಜ್ಞನ ತ್ರಿಪದಿಗಳು ಜೀವನ ಪರೀಕ್ಷೆಗೂ ಸಹಕಾರಿ

Btw_sarvajna
Published on

ಬಂಟ್ವಾಳ: ಸರ್ವಜ್ಞನ ತ್ರಿಪದಿಗಳು ಶಾಲೆ ಪರೀಕ್ಷೆಗಷ್ಟೇ ಅಲ್ಲ, ಜೀವನ ಪರೀಕ್ಷೆಗೂ ಸಹಕಾರಿ ಎಂದು ಪತ್ರಕರ್ತ ಸಂದೀಪ್ ಸಾಲ್ಯಾನ್ ಹೇಳಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಇದರ ಸಹಯೋಗದೊಂದಿಗೆ ಬಿ.ಸಿ.ರೋಡಿನ ಆಡಳಿತ ಸೌಧದ ಸಭಾಂಗಣದಲ್ಲಿ ಗುರುವಾರ ನಡೆದ ಬಂಟ್ವಾಳ ತಾಲೂಕು ಮಟ್ಟದ ಶ್ರೀ ಕವಿ ಸರ್ವಜ್ಞ ಜಯಂತಿ ಆಚರಣೆಯಲ್ಲಿ ಉಪನ್ಯಾಸ ನೀಡಿದರು.

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಕಾರ್ಯಾಧ್ಯಕ್ಷ ನಾರಾಯಣ ಸಿ.ಪೆರ್ನೆ ಅಧ್ಯಕ್ಷತೆ ವಹಿಸಿದರು. ರಾಜ್ಯ ಕುಲಾಲ ಕುಂಬಾರರ ಮಹಿಳಾ ಸಂಘ ಬಂಟ್ವಾಳದ ಅಧ್ಯಕ್ಷೆ ನಳಿನಿ ಮಹಾಬಲ, ಯುವ ವೇದಿಕೆ ತಾಲೂಕು ಅಧ್ಯಕ್ಷ ನಿತೀಶ್ ಕುಲಾಲ್ ಪಲ್ಲಿಕಂಡ, ವಿಜಯ ಪುರುಷೋತ್ತಮ, ತಾಲೂಕು ಕುಲಾಲ ಸುಧಾರಕ ಸಂಘದ ಕೋಶಾಧಿಕಾರಿ ಸೋಮನಾಥ ಸಾಲಿಯಾನ್ ಉಪಸ್ಥಿತರಿದ್ದರು.

ಚುನಾವಣೆ ವಿಷಯ ನಿರ್ವಾಹಕ ಮಂಜುನಾಥ ಕೆ ಎಚ್., ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ಉಪಸ್ಥಿತರಿದ್ದರು. ಉಪತಹಸೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರ್ವಹಿಸಿದರು. ಲಕ್ಷ್ಮಣ್ ಕುಲಾಲ್ ಅಗ್ರಬೈಲು ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net