ಜಿಲ್ಲಾ ಸರ್ವೋದಯ ಸಮಿತಿ ಸಭೆ

08mdk01
Published on

ಮಡಿಕೇರಿ:

ಕೊಡಗು ಜಿಲ್ಲಾ ಸರ್ವೋದಯ ಸಮಿತಿ ಸಭೆ ಸಮಿತಿ ಅಧ್ಯಕ್ಷ ಅಂಬೆಕಲ್ ಕುಶಾಲಪ್ಪ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ಗಾಂಧಿ ಸ್ಮಾರಕ ಭವನ ನಿರ್ಮಾಣ ಕಾರ್ಯದ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಮಿತಿ ಸದಸ್ಯ ಟಿ.ಪಿ. ರಮೇಶ್ ಪ್ರಾಸ್ತವಿಕವಾಗಿ ಮಾತನಾಡಿ, ಸರ್ವೋದಯ ಸಮಿತಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದ್ದು, ಜಿಲ್ಲೆಯಲ್ಲಿ ಗಾಂಧಿ ವಿಚಾರಧಾರೆಗಳ ಕುರಿತು ಬೆಳಕು ಚೆಲ್ಲುತ್ತಾ ಸಾಗಿರುವುದು ಶ್ಲಾಘನೀಯ ಎಂದರು.

ಗಾಂಧಿ ಮೈದಾನದ ಗಾಂಧಿ ಸ್ಮಾರಕ ಭವನದ ಕುರಿತು ಸಭೆಗೆ ಮಾಹಿತಿ ನೀಡಿದ ಅವರು ಸ್ಮಾರಕ ಭವನ ನಿರ್ಮಾಣಕ್ಕೆ ಸಕಾಲದಲ್ಲಿ ಸ್ಪಂದಿಸಿದ ಸರ್ಕಾರ ಈಗಾಗಲೇ 50 ಲಕ್ಷ ರೂ. ಬಿಡುಗಡೆ ಮಾಡಿದೆ. ಇದು ಸರ್ವೋದಯ ಸಮಿತಿಯ ನಿರಂತರ ಕಾರ್ಯ ಚಟುವಟಿಕೆಯ ಫಲ ಎಂದು ತಿಳಿಸಿದರು.

ಸ್ಮಾರಕ ಭವನ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸುವ ಬಗ್ಗೆ ಜಿಲ್ಲಾಡಳಿತದೊಂದಿಗೆ ಚರ್ಚಿಸಲಾಗಿದ್ದು, ಕಾಮಗಾರಿ ಶೀಘ್ರ ಆರಂಭಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

\ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್, ಪ್ರಮುಖರಾದ ಕಾನೆಹಿತ್ಲು ಮೊಣ್ಣಪ್ಪ, ಕೆ.ಟಿ.ಬೇಬಿ ಮ್ಯಾಥ್ಯೂ, ಎಂ.ಎA.ಲಿಯಾಕತ್ ಅಲಿ, ಅಂಬೆಕಲ್ ನವೀನ್, ಟಿ.ಎಂ.ಮುದ್ದಯ್ಯ, ರೇವತಿ ರಮೇಶ್, ಪ್ರೇಮಾ ಕೃಷ್ಣಪ್ಪ, ಯಶೋಧ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net