ಸರ್ವೋದಯ ಸಂಕಲ್ಪ ಶಿಬಿರ ಸಂಪನ್ನ

SARVODAYA SANKALPA SHIBIRA
ವಿಜಯಪುರ ನಗರದ ಮಹೇಶ್ವರಿ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸರ್ವೋದಯ ಸಂಕಲ್ಪ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ಪಾಲ್ಗೊಂಡ ಗ್ರಾಪಂ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು. ವಿಜಯ ಸಿಂಗ್, ಮಲ್ಲಿಕಾರ್ಜುನ ಲೋಣಿ, ಎಸ್.ಜಿ. ನಂಜಯ್ಯನಮಠ ಮತ್ತಿತರರಿದ್ದಾರೆ.
Published on

ವಿಜಯಪುರ: ನಗರದ ಮಹೇಶ್ವರಿ ಮಂಗಲ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ರಾಜೀವಗಾಂಧಿ ಪಂಚಾಯತ್ ರಾಜ್ ಸಂಘಟನೆಯಿಂದ ವಿಜಯಪುರ-ಬಾಗಲಕೋಟ ಜಿಲ್ಲೆಯ ಗ್ರಾಮ ಪಂಚಾಯಿತಿ ಸದಸ್ಯರಿಗಾಗಿ ಎರಡು ದಿನಗಳ ಕಾಲ ಹಮ್ಮಿಕೊಂಡಿದ್ದ ಸರ್ವೋದಯ ಸಂಕಲ್ಪ ಶಿಬಿರ ಬುಧವಾರ ಸಂಪನ್ನವಾಯಿತು.

ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಕರ್ನಾಟಕ ರಾಜ್ಯ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಗೌರವಾಧ್ಯಕ್ಷ ವಿಜಯ ಸಿಂಗ್ ಮಾತನಾಡಿ, ಗ್ರಾಪಂ ಸದಸ್ಯರು ಸರ್ಕಾರದ ಯೋಜನೆಗಳು ಹಾಗೂ ಅನುದಾನವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಗ್ರಾಮಗಳ ಅಭಿವೃದ್ಧಿಗೆ ಗ್ರಾಪಂ ಸದಸ್ಯರ ಕಾರ್ಯ ಪ್ರಮುಖವಾಗಿದೆ ಎಂದರು.

ಸಾರ್ವಜನಿಕರಿಗೆ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಸವಿಸ್ತಾರವಾಗಿ ತಿಳಿಸಲು ಸದಸ್ಯರಿಗೆ ಮಾಹಿತಿ ನೀಡಿದರು. ತಮ್ಮ ಜವಾಬ್ದಾರಿ ಮತ್ತು ಹಕ್ಕು ಚಲಾವಣೆ ಕುರಿತು ಮಾತನಾಡಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಬಾಗಲಕೋಟ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ, ರಾಜಿವ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಸಂಯೋಜಕಿ ಅಂಜಲಿ ರಾಮಣ್ಣ, ಸಂಘಟನೆಯ ಜಿಲ್ಲಾಧ್ಯಕ್ಷ ಮಲ್ಲನಗೌಡ ಬಿರಾದಾರ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಭಾಷ ಕಾಲೇಬಾಗ, ಪ್ರಧಾನ ಕಾರ್ಯದರ್ಶಿ ವಸಂತ ಹೊನಮೋಡೆ, ಎಂ.ಎಂ. ಮುಲ್ಲಾ (ದ್ಯಾಬೇರಿ), ದೇಸು ಚವಾಣ್, ಫಯಾಜ ಕಲಾದಗಿ, ಆನಂದ ಜಾಧವ, ದಿಲಿಪ ಪ್ರಭಾಕರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net