ಜೆಡಿಯುಗೆ ಶಶಿಕುಮಾರ್ ಗೌಡ ಗುಡ್‌ಬೈ

Shashikumar gowda
ಶಶಿಕುಮಾರ್ ಗೌಡ
Published on

ಶಿವಮೊಗ್ಗ: ಕಳೆದ 23 ವರ್ಷಗಳಿಂದ ಸಂಯುಕ್ತ ಜನತಾದಳ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿರುವ ಭದ್ರಾವತಿಯ ಶಶಿಕುಮಾರ್ ಗೌಡ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದೊಳಗೆ ಇತ್ತೀಚೆಗೆ ಕೈಗೊಂಡಿರುವ ನಿರ್ಧಾರಗಳಿಂದ ನಾನು ಬೇಸತ್ತಿದ್ದೇನೆ. ಹೀಗಾಗಿ ಪಕ್ಷ ತೊರೆಯುವ ತೀರ್ಮಾನ ಮಾಡಿದ್ದೇನೆ. ಭದ್ರಾವತಿ ತಾಲೂಕು ಜೆಡಿಯು ಕಾರ್ಯದರ್ಶಿಯಾಗಿ, ರಾಜ್ಯ ಯುವ ಘಟಕದ ಉಪಾಧ್ಯಕ್ಷನಾಗಿ, ರಾಜ್ಯ ಕಾರ್ಯದರ್ಶಿಯಾಗಿ ಇದುವರೆಗೆ ನಾನು ಕಾರ್ಯನಿರ್ವಹಿಸಿದ್ದೆ ಎಂದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ, ಭದ್ರಾವತಿ ವಿಧಾನಸಭಾ ಕ್ಷೇತ್ರದಿಂದ ಒಂದು ಬಾರಿ ಚುನಾವಣೆ ಎದುರಿಸಿದ್ದೆ. ವಿಧಾನ ಪರಿಷತ್ ಚುನಾವಣೆಗೆ ಒಮ್ಮೆ ಸ್ಪರ್ಧೆ ಮಾಡಿದ್ದೆ. 2018ರ ಲೋಕಸಭಾ ಉಪಚುನಾವಣೆಯಲ್ಲಿ 17,081 ಮತಗಳ ಮೂಲಕ 3ನೇ ಸ್ಥಾನ ಪಡೆದಿದ್ದೆ ಎಂದು ಹೇಳಿದರು. ಹಿತೈಷಿಗಳು ಹಾಗೂ ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ರಾಜಕೀಯ ನಡೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ತೀರ್ಮಾನ ಪ್ರಕಟಿಸಲಿದ್ದೇನೆ ಎಂದರು.
ಸಾಮಾಜಿಕ ಹೋರಾಟಗಾರರಾದ ವೆಂಕಟೇಶ್, ದಿವ್ಯಶ್ರೀ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net