ಸಾಸ್ವೆಹಳ್ಳಿ ಆಸ್ಪತ್ರೆಗೆ ಶಾಸಕ ಭೇಟಿ, ಪರಿಶೀಲನೆ

Sasvehalli, Health, MLA, Visit,
Published on

ಸಾಸ್ವೆಹಳ್ಳಿ: ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಡಿ.ಜಿ. ಶಾಂತನಗೌಡ ಜಿಲ್ಲಾ ಮತ್ತು ತಾಲೂಕು ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡಗಳೊಂದಿಗೆ ಮಂಗಳವಾರ ಭೇಟಿ ನೀಡಿ, ಸಾರ್ವಜನಿಕರ ಸಮಸ್ಯೆ ಆಲಿಸಿದರು.

ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಹಾಗೂ ವೈದ್ಯಾಧಿಕಾರಿ ವಿರುದ್ಧ ಸಾರ್ವಜನಿಕರಿಂದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಭೇಟಿ ನೀಡಿ, ಸಾರ್ವಜನಿಕರ ಅಹವಾಲು ಆಲಿಸಿ, ಸಿಬ್ಬಂದಿ ಸಮಸ್ಯೆ ವಿಷಯ ಕುರಿತು ಚರ್ಚಿಸಿದರು.

ಶಾಸಕರು, ತಕ್ಷಣವೇ ಇಬ್ಬರು ನರ್ಸ್‌ಗಳನ್ನು ನಿಯೋಜಿಸುವಂತೆ ಅಧಿಕಾರಿಗಳಿಗೆ ಸೂಚಿಸಿ, ಸದ್ಯದಲ್ಲೇ ಇಲ್ಲಿನ ವೈದ್ಯಾಧಿಕಾರಿಯನ್ನು ಬೇರೆಡೆಗೆ ವರ್ಗಾವಣೆ ಮಾಡಿ ಬೇರೊಬ್ಬ ವೈದ್ಯರನ್ನು ನೇಮಿಸುವುದಾಗಿ ಹೇಳಿದರು.

ಈ ವೇಳೆ ದಾವಣಗೆರೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಷಣ್ಮುಖಪ್ಪ, ಹೊನ್ನಾಳಿ ತಾಲೂಕು ಆರೋಗ್ಯ ಅಧಿಕಾರಿ ಎನ್.ಎಚ್. ಗಿರೀಶ್, ಪಿಐ ಸುನಿಲ್‌ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net