

ವಿಜಯವಾಣಿ ಸುದ್ದಿಜಾಲ ಉಡುಪಿ
ಭಾರತ ದೇಶದಲ್ಲಿ ಪಾಶ್ಚಾತ್ಯ ಸಂಸತಿಯ ಅಟ್ಟಹಾಸ ಕಂಡು ಬರುತ್ತಿರುವ ಸಂದರ್ಭದಲ್ಲಿ ಪಾಶ್ಚಾತ್ಯ ದೇಶಗಳಲ್ಲಿ ಕಡಲ ಒಡೆಯನಾದ ಶ್ರೀಕೃಷ್ಣನ ಮಂದಿರ ನಿರ್ಮಿಸುವ ಮೂಲಕ ಪುತ್ತಿಗೆ ಸುಗುಣೇಂದ್ರ ಶ್ರೀಗಳು ಹಿಂದು ಧರ್ಮ ಪ್ರಸಾರ ಮಾಡುತ್ತಿರುವುದು ಅನನ್ಯ ಕಾರ್ಯವಾಗಿದೆ ಎಂದು ಕಾಸರಗೋಡಿನ ಶಂಕರಾಚಾರ್ಯ ಸಂಸ್ಥಾನದ ಎಡನೀರು ಮಠದ ಸಚ್ಚಿದಾನಂದ ಭಾರತೀ ಸ್ವಾಮೀಜಿ ಶ್ಲಾಘಿಸಿದರು.
ಕಿರಿಯ ಶಿಷ್ಯ ಸುಶ್ರೀಂದ್ರ ಶ್ರೀ ಸಾನ್ನಿಧ್ಯ ವಹಿಸಿದ್ದರು. ಮಠದ ದಿವಾನ ನಾಗರಾಜ ಆಚಾರ್ಯ, ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಶ್ರೀಗಳ ಆಪ್ತ ಕಾರ್ಯದರ್ಶಿ ರತೀಶ ತಂತ್ರಿ, ರಮೇಶ ಭಟ್ ಇತರರಿದ್ದರು.