

ಮಂಗಳೂರು : ಕಾಂಗ್ರೆಸ್ ಸರ್ಕಾರದ ಮುಸ್ಲಿಂ ತುಷ್ಠೀಕರಣ ನೀತಿಯಿಂದ ಹಿಂದುಗಳು ಬವಣೆ ಪಡುವಂತಾಗಿದೆ. ಡಾ.ಕಲ್ಲಡ್ಕ
ಪ್ರಭಾಕರ ಭಟ್ ಅವರ ಮೇಲೆ ಎಫ್‌ಐಆರ್ ದಾಖಲು, ಹಿಂದು ನಾಯಕರನ್ನು ಗುರುತಿಸಿ ಗಡಿಪಾರು ಮಾಡಲು ಹೊರಟಿರುವುದು, ವಿಚಾರಣೆ ನೆಪದಲ್ಲಿ ಹಿಂದುತ್ವಕ್ಕಾಗಿ ದುಡಿಯುತ್ತಿರುವ ಕಾರ್ಯಕರ್ತರ ಮನೆಗೆ ರಾತ್ರಿ ಹೊತ್ತಲ್ಲಿ ಪೊಲೀಸರು ಬರುತ್ತಿರುವುದು ಜಿಲ್ಲೆಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿಕೆ ಮಾಡಿರುವಂತಿದೆ ಎಂದು ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾಎಡ.
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಮತ್ತು ಪಕ್ಷದ ಪದಾಧಿಕಾರಿಗಳ ನಿಯೋಗ ಮಂಗಳವಾರ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾಗಿ ಹಿಂದುತ್ವಕ್ಕಾಗಿ ದುಡಿಯುತ್ತಿರುವವರನ್ನು ಕ್ರಿಮಿನಲ್ ರೀತಿ ಬಿಂಬಿಸುವುದರ ಬಗ್ಗೆ ತೀವ್ರ ಅಸಮಾಧಾನ’
ವ್ಯಕ್ತ ಪಡಿಸಿದ್ದಾರೆ. ಇಲಾಖೆಯು ಆಡಳಿತ ಪಕ್ಷದ ನಿರ್ದೇಶನಕ್ಕೆ ಒಳಗಾಗದೆ ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಿದರೆ ಜಿಲ್ಲೆಯ ಶಾಂತಿ ಸುವ್ಯವಸ್ಥೆ ಸ್ಥಾಪನೆಗೆ ಬಿಜೆಪಿ ಸಹಕರಿಸಲಿದೆ ಎಂದು ಕುಂಪಲ ಹೇಳಿದರು.
ಅಮಾಯಕರನ್ನು ಮಾನಸಿಕವಾಗಿ ಹಿಂಸಿಸುವುದನ್ನು, ಸಂಘ ಪರಿವಾರದ ಕಾರ್ಯಕರ್ತರ ಮನೋಬಲವನ್ನು ಕುಗ್ಗಿಸಲು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡುತ್ತಿರುವುದನ್ನು ತಕ್ಷಣ ನಿಲ್ಲಿಸದಿದ್ದರೆ ಹೋರಾಟ ಅನಿವಾರ್ಯವಾಗಲಿದೆ. ಅಮಾಯಕರು, ಸಂಘ ಪರಿವಾರದ ಕಾರ್ಯಕರ್ತರ ಜತೆಯಲ್ಲಿ ಪಕ್ಷ ಸದಾ ಇರಲಿದೆ. ಎಂದು ಅವರು ತಿಳಿಸಿದ್ದಾರೆ.
ಶಾಸಕರಾದ ರಾಜೇಶ್ ನಾಕ್, ಉಮಾನಾಥ ಕೋಟ್ಯಾನ್, ಡಾ.ವೈ. ಭರತ್ ಶೆಟ್ಟಿ, ಹರೀಶ್ ಪೂಂಜಾ, ಭಾಗೀರಥಿ ಮುರುಳ್ಯ, ಎಂಎಲ್‌ಸಿ ಕಿಶೋರ್ ಕುಮಾರ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ ನಿಯೋಗದಲ್ಲಿದ್ದರು.