ಬಿಜೆಪಿ ಸಂಘಟನೆ ಮತ್ತಷ್ಟು ಬಲಿಷ್ಠ- ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

kumpaa-620x369
Published on



ಮಂಗಳೂರು : ಬಿಜೆಪಿ ಕಾರ್ಯಕರ್ತರ ಹುಮ್ಮಸ್ಸು, ಚುನಾವಣಾ ಕಣದಲ್ಲಿ ದಣಿವರಿಯದೆ ಹೋರಾಡಿದ ಪರಿಣಾಮ ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಅಭೂತಪೂರ್ವ ಜಯವಾಗಿದೆ. ಲೋಕಸಭಾ ಚುನಾವಣೆಯಲ್ಲಿ.ಕಳೆದ ಮೂರು ದಶಕಗಳಿಗೂ ಮಿಕ್ಕಿ ಜಯಭೇರಿ ಗಳಿಸುತ್ತಾ ಬಂದಿರುವ ಜಿಲ್ಲೆಯಲ್ಲಿ ಮತದಾರರು ಮತ್ತೊಮ್ಮೆ ಬಿಜೆಪಿಗೆ ಆಶೀರ್ವಾದಿಸಿದ್ದಾರೆ. ಕರಾವಳಿ ಜನತೆ ಬಿಜೆಪಿ ಪರವಾಗಿದ್ದಾರೆ ಎನ್ನುವುದು ಮತ್ತೆ ಸಾಬೀತಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.
ಭಾರತೀಯ ಸೇನೆಯಲ್ಲಿ ಸೇವೆಗೈದ ಯೋಧ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಂಸದರಾಗಿ ಆಯ್ಕೆಯಾಗಿರುವುದು ನಮ್ಮೆಲ್ಲರ ಹೆಮ್ಮೆ. ಸರಳ ಸಜ್ಜನ ಎಆ.ಧನಂಜಯ ಸರ್ಜಿ ಅವರ ಜತೆ ಅದ್ಭುತ ಕೆಲಸಗಾರ ಎನ್‌ಡಿಎ ಅಭ್ಯರ್ಥಿ ಎಸ್.ಎಲ್.ಭೋಜೆಗೌಡ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವುದು ಜಿಲ್ಲೆಯ ಜನರು ಪಕ್ಷದ ಮೇಲಿಟ್ಟಿರುವ ವಿಶ್ವಾಸವನ್ನು ಇನ್ನಷ್ಟು ಮೇಲ್ಮಟ್ಟಕ್ಕೇರಿಸಿದೆ.
ಹಿರಿಯರ ತ್ಯಾಗ, ಕಾರ್ಯಕರ್ತರ ಸಮರ್ಪಣೆ ಯಿಂದ ಬಲಿಷ್ಠವಾಗಿರುವ ಸಂಘಟನೆಯನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ಬಲಪಡಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net