

ಮಂಗಳೂರು : ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ ನಿಷೇಧಿಸುತ್ತೇವೆ ಎನ್ನುವ ಸಚಿವ ಪ್ರಿಯಾಂಕ ಖರ್ಗೆ, ಅದನ್ನು ಸಮರ್ಥಿಸುವ ಎಂಎಲ್‌ಸಿ ಮಂಜುನಾಥ ಭಂಡಾರಿ ಅವರ ಹೇಳಿಕೆಗಳು ಖಂಡನೀಯ . ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು,
ಆರ್‌ಎಸ್‌ಎಸ್ ನಿಷೇಧಿಸುವುದು ತಿರುಕನ ಕನಸು ಎಂದು ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ನೂರು ವರುಷದ ಇತಿಹಾಸವುಳ್ಳ ಆರ್‌ಎಸ್‌ಎಸ್ ವ್ಯಕ್ತಿ ಪ್ರತಿಷ್ಠೆಗಾಗಿ, ಅಧಿಕಾರದ ಲಾಲಸೆಗಾಗಿ ಯಾವುದೇ ಕಾರ್ಯ ನಡೆಸಿಲ್ಲ.
ಹಿಂದು ಸಮಾಜದ ಸಂಘಟನೆಯ ಜತೆಯಲ್ಲಿ ರಾಷ್ಟ್ರ ಚಿಂತನೆಯ ಪರಿಕಲ್ಪನೆಯಲ್ಲಿ ಮುನ್ನಡೆಯುತ್ತಿದೆ. ಅಲ್ಪಸಂಖ್ಯಾತರೇ ಅಧಿಕವಿರುವ ಕಾಶ್ಮೀರದಲ್ಲಿ ಪ್ರವಾಹ ಬಂದ ಸಂದರ್ಭದಲ್ಲಿಯೂ ಸಂಘದ ಸ್ವಯಂ ಸೇವಕರು ಪ್ರಾಣದ ಹಂಗು ಸಂತ್ರಸ್ತರ ರಕ್ಷಣೆಗೆ ಧಾವಿಸಿದ್ದರು ಎನ್ನುವುದನ್ನು ಪ್ರಿಯಾಂಕ ಖರ್ಗೆ ನೆನಪಿಸಲಿ ಎಂದು ಅವರು ಹೇಳಿದ್ದಾರೆ.
ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ದೇಶದ ಸಂವಿಧಾನವನ್ನು ಗೌರವಿಸುವ ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ಮೊದಲು ಅಧಿಕಾರದ ಉಳಿವಿಗಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹಾಳು ಮಾಡಿ ತುರ್ತು ಪರಿಸ್ಥಿತಿ ಘೋಷಿಸಿದ ದಿ.ಇಂದಿರಾ ಗಾಂಧಿ ಅವರ ಸರ್ವಾಧಿಕಾರದ ಬಗ್ಗೆ ಪ್ರಿಯಾಂಕಾ ಖರ್ಗೆ ಮಾತನಾಡಲಿ. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಲು ಪಣತೊಟ್ಟ,ಅವರ ನಿಧನದ ಬಳಿಕ
ಅಂತ್ಯ ಸಂಸ್ಕಾರಕ್ಕೂ ದೆಹಲಿಯಲ್ಲಿ ಅವಕಾಶ ನೀಡದ ನೆಹರೂ ಬಗ್ಗೆ ಪ್ರಿಯಾಂಕಾ ಖರ್ಗೆ ಜನಸಾಮಾನ್ಯರಿಗೆ ಹೇಳಲಿ ಎಂದು ಸತೀಶ್ ಕುಂಪಲ
ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.