

ಕಾಸರಗೋಡು: ಶ್ರೀ ಸತ್ಯಸಾಯಿ ಸೇವಾ ಸಂಸ್ಥೆ ಕಾಸರಗೋಡು ಜಿಲ್ಲೆ ಇದರ ತ್ರೈಮಾಸಿಕ ಸಮಾವೇಶ ಕಾಸರಗೋಡಿನ ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಕಚೇರಿಯಲ್ಲಿ ಜರುಗಿತು. ಸಂಸ್ಥೆ ಜಿಲ್ಲಾಧ್ಯಕ್ಷ ಹಿರಣ್ಯ ಮಹಾಲಿಂಗ ಭಟ್ ಧ್ವಜಾರೋಹಣ ನೆರವೇರಿಸಿದರು.
ಮಂದಿರದ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸ್ವಾಮಿ ನಾಮಸ್ಮರಣೆ, ಸಾಮೂಹಿಕ ಸಾಯಿ ಗಾಯತ್ರಿ ಪಠಣದ ನಂತರ ಸಭಾ ಕಾರ್ಯಕ್ರಮ ನಡೆಯಿತು. ಜಿಲ್ಲೆಯ ಎಲ್ಲ ಸಮಿತಿ ಸಂಚಾಲಕರು ತಮ್ಮ ಸಮಿತಿಗಳಲ್ಲಿ ಜರುಗಿದ ಕಾರ್ಯಕ್ರಮಗಳ ವರದಿ ವಾಚಿಸಿದರು. ಸಂಸ್ಥೆಯ ಜಿಲ್ಲಾ ಪದಾಧಿಕಾರಿಗಳು ವಿವಿಧ ವಿಭಾಗಗಳ ವತಿಯಿಂದ ನಡೆಯುವ ಕಾರ್ಯಕ್ರಮಗಳ ಬಗ್ಗೆ ಸಲಹೆ ಸೂಚನೆ ನೀಡಿದರು. ಸಂಸ್ಥೆ ಜಿಲ್ಲಾಧ್ಯಕ್ಷ ಮಹಾಲಿಂಗ ಭಟ್, ಉಪಾಧ್ಯಕ್ಷ ರಾಮಚಂದ್ರ ಚೆರುಗೋಳಿ, ವಿವಿಧ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮುಂದಿನ ದಿನಗಳಲ್ಲಿ ಸಂಸ್ಥೆಯನ್ನು ಇನ್ನಷ್ಟು ಬಲಪಡಿಸಿ ರಾಷ್ಟ್ರ, ರಾಜ್ಯ ಸಂಸ್ಥೆಯಿಂದ ಕೈಗೊಳ್ಳುವ ಕಾರ್ಯ ಚಟುವಟಿಕೆಗಳಲ್ಲಿ ಸಮಿತಿ ಸಕ್ರಿಯವಾಗಿ ಪಾಲ್ಗೊಳ್ಳಲು ತೀರ್ಮಾನಿಸಲಾಯಿತು. ಮಹಾಮಂಗಳಾರತಿ, ನಾರಾಯಣ ಸೇವೆಯೊಂದಿಗೆ ಸಮಾರಂಭ ಸಂಪನ್ನಗೊಂಡಿತು.