ಗೋದಾಮಿನಲ್ಲಿ ಅಕ್ಕಿ ಇದ್ದರೂ ಕೇಂದ್ರ ಬಿಜೆಪಿ ಸರ್ಕಾರ ಕೊಡ್ತಿಲ್ಲ;ಸಚಿವ ಜಾರಕಿಹೊಳಿ ಆಕ್ರೋಶ.

IMG-20230620-WA0012.jpg
Published on

ಬೆಳಗಾವಿ: ಗೋದಾಮಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಕ್ಕಿ ಸಂಗ್ರಹವಿದ್ದರೂ ಕೇಂದ್ರ ಬಿಜೆಪಿ ಸರ್ಕಾರ ಕೊಡ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ನಗರದ ಚನ್ನಮ್ಮವೃತದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಘೋಷಣೆ ಮಾಡಿದಂತೆ ಜನರಿಗೆ ಹತ್ತು ಕೆಜಿ ಹಕ್ಕಿ ಕೊಡುತ್ತೇವೆ. ಜನರು ನಂಬಿಕೆ ಉಳಿಸಿಕೊಳ್ಳುತ್ತೇವೆ ಎಂದರು. ನಮ್ಮ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರದ ಅನುಮತಿ ಬೇಕಿಲ್ಲ. ಗೋದಾಮಿನಲ್ಲಿ ಸಾಕಷ್ಟು ಅಕ್ಕಿ ಇದ್ದರೂ ರಾಜ್ಯಕ್ಕೆ ಹಕ್ಕಿ ನೀಡುತ್ತಿಲ್ಲ. ಹಾಗಾಗಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net