

ಬೆಳಗಾವಿ: ಕಿತ್ತೂರು ಉತ್ಸವ ಹಾಗೂ ಐತಿಹಾಸಿಕ ಚನ್ನಮ್ಮನ ವಿಜಯೋತ್ಸವದ 200 ನೇ ವರ್ಷಾಚರಣೆಯ ಸಮಾರೋಪ ಸಮಾರಂಭದಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರು ಪಾಲ್ಗೊಂಡಿದ್ದಾರೆ. ಆದರೆ, ಜಿಲ್ಲೆಯವರೇ ಆದ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಗೈರಾಗುವ ಮೂಲಕ ಚರ್ಚೆ ಗ್ರಾಸವಾಗಿದೆ. ಜಿಲ್ಲೆಗೆ ಸಿಎಂ ಬಂದರೂ ಸಚಿವದ್ವಯರು ಗೈರಾಗಿರುವುದು ತೀವ್ರ ರಾಜಕೀಯ ಕುತೂಹಲಕ್ಕೆಕಾರಣವಾಗಿದೆ. ಸಿಎಂ ಬದಲಾವಣೆಯ ಮಾತುಗಳು ಕೇಳಿ ಬರುತ್ತಿರುವ ಹೊತ್ತಿನಲ್ಲಿ, ಸಿಎಂ ಕಾರ್ಯಕ್ರಮಕ್ಕೆ ಗೈರಾಗಿರುವುದು ಹೊಸ ಚರ್ಚೆ ಹುಟ್ಟು ಹಾಕಿದೆ.