ಸತೀಶ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡಲಿ

13Manju4-web
ಮಹಾದೇವ ತಳವಾರ, ಯಲ್ಲಪ್ಪ ಹುದಲಿ ಮಾತನಾಡಿ, ಎಲ್ಲ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಮನವಿ ಪತ್ರದಲ್ಲಿ ರಕ್ತದ ಸಹಿ ಮಾಡುವ ಮೂಲಕ ಸಚಿವ ಸತೀಶ ಅವರಿಗೆ ಶೀಘ್ರ ಡಿಸಿಎಂ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸುತ್ತಿದ್ದೇವೆ ಎಂದು ತಿಳಿಸಿದರು. ಮುಖಂಡರಾದ ವಿನೋದ ಸೊಲ್ಲಾಪುರೆ, ಸುಧೀರ ಚೌಗಲೆ, ಸಿದ್ದಪ್ಪ ಕಾಂಬಳೆ, ಸಂತೋಷ ಹಲಗೇಕರ್, ಗಜಾನನ ಸುಳಗೇಕರ, ಪ್ರವೀಣ ಪೂಜಾರಿ, ಬಾವಕಣ್ಣ ಪಿರಗಾಣಿ, ಕರೆಪ್ಪ ಗುಡೆಣ್ಣವರ, ರಮಾನಂದ ಮೇತ್ರಿ ಇತರರಿದ್ದರು.
Published on

ಬೆಳಗಾವಿ: ಉತ್ತರ ಕರ್ನಾಟಕ ಭಾಗದವರಿಗೆ ಸೂಕ್ತ ಸ್ಥಾನಮಾನ ನೀಡುವುದರ ಜತೆಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ದಲಿತ ಸಂಘಟನೆ ಮುಖಂಡ ಮಲ್ಲೇಶ ಚೌಗಲೆ ಆಗ್ರಹಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ದಲಿತ ಸಂಘಟನೆಗಳ ಒಕ್ಕೂಟದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ, ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೆವಾಲಾ ಅವರಿಗೆ ಸಚಿವ ಸತೀಶ ಜಾರಕಿಹೊಳಿ ಅವರನ್ನು ಡಿಸಿಎಂ ಮಾಡಬೇಕು ಎಂದು ಮನವಿ ಸಲ್ಲಿಸಿದ್ದೇವೆ ಎಂದರು.

35-40 ವರ್ಷಗಳಿಂದ ಬಡ ಕುಟುಂಬಗಳಿಗೆ, ಸಾರ್ವಜನಕರಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆ ಮತ್ತು ಅಭಿವೃದ್ಧಿಗೆ ಅನುಕೂಲ ಆಗುವ ಸಾಕಷ್ಟು ಕೆಲಸ ಮಾಡುತ್ತ ಬಂದಿದ್ದಲ್ಲದೆ ತಮ್ಮ ವ್ಯಕ್ತಿತ್ವಕ್ಕೆ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಕಾರ್ಯ ನಿರ್ವಹಿಸಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಕಟ್ಟಿದ್ದಾರೆ. ಅವರ ಚಾಣಾಕ್ಷತನದಿಂದ ಕೆಲಸ ಮಾಡಿದ್ದಕ್ಕಾಗಿಯೇ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಸೀಟು ಗೆಲ್ಲಲು ಸಾಧ್ಯವಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net