

ಎನ್.ಆರ್.ಪುರ: ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷರಾಗಿ ಎನ್.ಆರ್.ಸತೀಶ್ ಅವಿರೋಧವಾಗಿ ಆಯ್ಕೆಯಾದರು.
ಎ.ಎಲ್.ಮಹೇಶ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ಎನ್.ಆರ್.ಸತೀಶ್ ಒಬ್ಬರೇ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿಯಾಗಿ ಅನೂಷಾ ಕಾರ್ಯನಿರ್ವಹಿಸಿದರು.
ನೂತನ ಅಧ್ಯಕ್ಷರನ್ನು ಬ್ಯಾಂಕ್ ನಿರ್ದೇಶಕ ಜಿ.ವಿ.ಸಂದೇಶ್ ಅಭಿನಂದಿಸಿ ಮಾತನಾಡಿ, ಪಿಸಿಎಆರ್‌ಡಿ ಬ್ಯಾಂಕ್ 4 ವರ್ಷದಿಂದ ಸತತವಾಗಿ ಸಾಲ ವಸೂಲಾತಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ. ಮುಂದಿನ ವರ್ಷಗಳಲ್ಲೂ ಪ್ರಥಮ ಸ್ಥಾನ ಕಾಯ್ದುಕೊಂಡು ಹೋಗಬೇಕು ಎಂದರು.
ಬ್ಯಾಂಕ್ ಅಧ್ಯಕ್ಷ ರಂಗನಾಥ್ ಮಾತನಾಡಿ, ಬ್ಯಾಂಕ್‌ನಲ್ಲಿ ರೈತರಿಗೆ ಶೇ.3ರ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ. ಸಾಲ ಪಡೆದವರು ಸಕಾಲದಲ್ಲಿ ಮರುಪಾವತಿ ಮಾಡಬೇಕು ಎಂದು ಮನವಿ ಮಾಡಿದರು.
ನಿರ್ದೇಶಕರಾದ ಎನ್.ಜಿ.ನಾಗೇಶ್, ಜಯಪಾಲ್, ವೈ.ಎಸ್.ರವಿ, ವಿ.ಕೆ.ಸನ್ನಿ, ಕೆ.ಜಿ.ಮಲ್ಲಪ್ಪಗೌಡ, ಬಾಬು, ಎಸ್.ಎನ್.ವೆಂಕಟೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಎಸ್ ಗೋಪಾಲ್, ತಾಲೂಕು ಬಿಜೆಪಿ ಅಧ್ಯಕ್ಷ ಅರುಣಕುಮಾರ್, ಬಿಜೆಪಿ ಮುಖಂಡರಾದ ಪರ್ವೀಜ್, ಸುರಭಿ ರಾಜೇಂದ್ರ, ಮಂಜುನಾಥ್ ಲಾಡ್, ಬ್ಯಾಂಕ್ ವ್ಯವಸ್ಥಾಪಕ ಎಚ್.ಎ.ಪ್ರದ್ಯುಮ್ನ ಇದ್ದರು.