

ಧಾರವಾಡ: ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ಶೀತ ಗಾಳಿ ಬೀಸುತ್ತಿರುವುದರಿಂದ ಎರಡು ದಿನ ರಜೆ ನೀಡಿದ್ದ ಜಿಲ್ಲಾಡಳಿತ ಶನಿವಾರವೂ ರಜೆ ಘೋಷಣೆ ಮಾಡಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜು. 27 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ.
ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಬಹುತೇಕ ಕಡೆ ನಿರಂತರವಾಗಿ ಮಳೆ ಆಗುತ್ತಿದ್ದು, ತಂಪುಗಾಳಿ ಬೀಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಖಾಸಗಿ, ಅನುದಾನಿತ, ಸರ್ಕಾರಿ ಶಾಲಾ- ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣಿಕೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದ್ದಾರೆ.