

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಎಸ್.ಎಸ್.ಪಿ.ಯು ಕಾಲೇಜಿನಲ್ಲಿ ಸೋಮವಾರ ಸತ್ಯನಾರಾಯಣ ಪೂಜೆ, ಶಾರದಾ ಪೂಜೆ ನಡೆಯಿತು.
ಆರಂಭದಲ್ಲಿ ಸಂಕಲ್ಪ ನೆರವೇರಿಸಿದ ಪುರೋಹಿತರು ಪೂಜೆಯ ವೈದಿಕ ವಿಧಿವಿಧಾನ ನೆರವೇರಿಸಿ ಪೂಜೆ ನಡೆಸಿದರು. ದೇವತಾ ಪ್ರಾರ್ಥನೆ ಮಾಡಿ ಪ್ರಸಾದ ವಿತರಿಸಿದರು. ಪ್ರೌಢಶಾಲಾ ವಿಭಾಗದ ಶಿಕ್ಷಕ-ರಕ್ಷಕ ಸಂಘ ಸದಸ್ಯ ಗಣೇಶ್ ಪರ್ವತಮುಖಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಭಜನೆ ನೆರವೇರಿಸಿದರು. ಬಳಿಕ ಹುಲಿವೇಷ ಕುಣಿತ ನಡೆಯಿತು.
ಕುಕ್ಕೆ ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಪ್ರಾಚಾರ್ಯ ಸೋಮಶೇಖರ್ ನಾಯಕ್, ಪ್ರೌಢಶಾಲಾ ಮುಖ್ಯಶಿಕ್ಷಕಿ ನಂದಾ ಹರೀಶ್, ಹಿರಿಯ ಸಹಶಿಕ್ಷಕ ಎಂ.ಕೃಷ್ಣ ಭಟ್, ಸಾಂಸ್ಕೃತಿಕ ಸಂಘದ ಸಂಚಾಲಕಿ ರೇಖಾರಾಣಿ ಸೋಮಶೇಖರ್, ವಿದ್ಯಾರ್ಥಿ ಸಂಘ ಸಂಚಾಲಕ ಜಯಪ್ರಕಾಶ್ ಆರ್., ಸ್ಟಾಪ್ ಸೆಕ್ರೆಟರಿ ಗಿರೀಶ್, ಶಿಕ್ಷಕ-ರಕ್ಷಕ ಸಂಘ ಅಧ್ಯಕ್ಷ ರಾಮಕೃಷ್ಣ ಹೊಳ್ಳಾರು, ಉಪಾಧ್ಯಕ್ಷ ಗುಣವರ್ಧನ ಕೆದಿಲ ಮತ್ತಿತರರು ಉಪಸ್ಥಿತರಿದ್ದರು.